ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸೋಮವಾರ ನಾಮಪತ್ರ ಸಲ್ಲಿಸಿದರು.
ಲೋಕಸಭೆ ಚುನಾವಣೆ ಎರಡನೇ ಹಂತದ ಚುನಾವಣೆ ಯಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಚನ್ನಮ್ಮ ವೃತ್ತದಲ್ಲಿ ಗಣಪತಿ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನಾಮಪತ್ರ ಸಲ್ಲಿಕೆ ಮಾಡಿದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ, ಸಂಸದೆ ಮಂಗಲ ಅಂಗಡಿ, ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ ಸಾಥ್ ನೀಡಿದರು.