ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾನಾಗರಾಜ್ ಅವರಿಗೆ ಮನವಿ ಸಲ್ಲಿಸಿದ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕರ್ತರು ಚಿಕ್ಕಮಗಳೂರು ನಗರದಲ್ಲಿಯೇ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಕುರುವಂಗಿ ವೆಂಕಟೇಶ್, ಸೀತಾರಾಮಭರಣ್ಯ, ಕನಕರಾಜ್, ರೇವನಾಥ್, ಕೇಶವ ಮತ್ತಿತರರಿದ್ದರು. 
ಜಿಲ್ಲೆ

ತರಬೇತಿ ಕೇಂದ್ರ ಆರಂಭಿಸುವಂತೆ ಬಿಜೆಪಿ ಒತ್ತಾಯ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಜಿಲ್ಲಾ ಕೇಂದ್ರದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ವಿಶ್ವಕರ್ಮ ಯೋಜನೆ ಫಲಾನುಭವಿಗಳಿಗೆ ತರಬೇತಿ ಕೇಂದ್ರಗಳು ಇಲ್ಲದಿರುವ ಹಿನ್ನೆಲೆ ಕೂಡಲೇ ತರಬೇತಿ ಕೇಂದ್ರರ ಆರಂಭಿಸಿ ಅನುಕೂಲ ಒದಗಿಸಿಕೊಡುವಂತೆ ಮನವಿ ಮಾಡಿದರು.
ವಿಶ್ವಕರ್ಮ ಯೋಜನೆಯಲ್ಲಿ ವಿವಿಧ ಕುಶಲ ಕರ್ಮಿಗಳ ಅಡಿಯಲ್ಲಿ ಅನುದಾನ ಪಡೆಯಲು ತಾಲೂಕು ಮತ್ತು ನಗರ ಪ್ರದೇಶದ ನೂರಾರು ಮಂದಿ ಅಜಿಘ ಸಲ್ಲಿಸಿದ್ದಾರೆ. ಆದರೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕಡೂರು, ತರೀಕೆರೆ ಅಥವಾ ಅರಸೀಕೆರೆ ತಾಲೂಕಿಗೆ ತರಬೇತಿಗೆ ಬರುವಂತೆ ಹೇಳಲಾಗುತ್ತಿದೆ. ಹೀಗಾಗಿ ಚಿಕ್ಕಮಗಳೂರು ನಗರದಲ್ಲೇ ತರಬೇತಿ ಕೇಂದ್ರ ಆರಂಭಿಸಬೇಕು ಎಂದು ಹೇಳಿದರು.
ಜಿಲ್ಲಾ ಕೇಂದ್ರದಲ್ಲಿ ತರಬೇತಿ ಕೇಂದ್ರ ಆರಂಭವಾಗದಿರುವ ಕಾರಣ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ತೀವ್ರ ಸಮಸ್ಯೆಯಾಗಿದೆ. ಹಾಗಾಗಿ ಜಿಲ್ಲಾಡಳಿತ ಶೀಘ್ರವೇ ಎಚ್ಚೆತ್ತುಕೊಂಡು ಜಿಲ್ಲಾ ಕೇಂದ್ರ ದಲ್ಲಿ ಸದ್ಯದಲ್ಲೇ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಈ ವಿಷಯವಾಗಿ ಜಿಲ್ಲಾಡಳಿತ ವಿಳಂಭ ಧೋರಣೆ ಅನುಸರಿಸಿ ಫಲಾನುಭವಿಗಳಿಗೆ ತೊಂದರೆಯುಂಟು ಮಾಡಿದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಮಭರಣ್ಯ, ಜಿಲ್ಲಾ ಉಪಾಧ್ಯಕ್ಷ ಕನಕರಾಜ್, ನಗರ ಮಂಡಲ ಉಪಾಧ್ಯಕ್ಷ ರೇವನಾಥ್, ಮಾಧ್ಯಮ ಸಹ ಪ್ರಮುಖ್ ಕೇಶವ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಸಹ ವಕ್ತಾರ ಹಂಪಯ್ಯ, ನಗರ ಎಸ್ಸಿ ಮೋರ್ಚಾ ಅಧ್ಯಕ್ಷ ಜಗದೀಶ್, ಪ್ರಮುಖರಾದ ಶೇಖರ್, ನರಸಿಂಹಮೂರ್ತಿ ಮತ್ತಿತರರಿದ್ದರು.