ಮೈಸೂರು: ಬರ ಪರಿಹಾರ ನೀಡುವ ನಿಟ್ಟಿನಲ್ಲಿ ವಿಫಲವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ತನ್ನ ವೈಫಲ್ಯ ಮುಚ್ಚಿಕೊಳ್ಳಲು ದೇಶವನ್ನು ಸುಳ್ಳಿನಿಂದ ವಂಚಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜಿ.ವಿ.ಸೀತಾರಾಂ ಟೀಕಿಸಿದರು.
ಏಕ ಚಕ್ರಾಧಿಪತಿಯಂತೆ ನಡೆದುಕೊಳ್ಳುತ್ತಿರುವ ಪ್ರಧಾನಿ ಮೋದಿ ಇಡೀ ದೇಶಕ್ಕೆ ಸುಳ್ಳನ್ನೇ ಪಸರಿಸುತ್ತಿದ್ದಾರೆ. ಹೀಗಾಗಿ ಮೋದಿ ಇಲ್ಲದಿದ್ದರೆ ಬಿಜೆಪಿ, ಆರ್‌ಎಸ್‌ಎಸ್ ಇಲ್ಲವೇ ಇಲ್ಲ ಎನ್ನುವಂತಾಗಿದೆ. ಕೇವಲ ಮೋದಿ ಗ್ಯಾರಂಟಿ ಎನ್ನುವ ಮೂಲಕ ಬಿಜೆಪಿ ಪ್ರಣಾಳಿಕೆಯೂ ಇಲ್ಲದೆ ಚುನಾವಣೆ ನಡೆಸುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ರಾಜ್ಯದ ಸಿಎಂ ಸೇರಿದಂತೆ ಸಂಪುಟದ ಎಲ್ಲರೂ ರಾಜ್ಯದಲ್ಲಿನ ಬರ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೂ ಕೇಂದ್ರದಿಂದ ಪರಿಹಾರ ಬಂದಿಲ್ಲ. ಸಂದರ್ಶನವೊಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಾಜ್ಯಕ್ಕೆ ಬರ ಪರಿಹಾರ ನೀಡುವ ನಿಟ್ಟಿನಲ್ಲಿ ತಾಂತ್ರಿಕ ತೊಂದರೆ ಎದುರಾದವು ಎನ್ನುವ ಮೂಲಕ ಕೇಂದ್ರ ಪರಿಹಾರ ನೀಡುವ ನಿಟ್ಟಿನಲ್ಲಿ ವೈಫಲ್ಯ ಒಪ್ಪಿಕೊಂಡಂತಾಗಿದೆ. ಮೋದಿ ಅವರ ವಿಕಸಿತ ಭಾರತ ಪರಿಕಲ್ಪನೆಯೂ ಸುಳ್ಳಾಗಿದೆ. ಕಳೆದ ಹತ್ತು ವರ್ಷಗಳಿಂದ ಅವರು ಹೇಳಿದ್ದನ್ನೇ ಹೇಳುತ್ತಿದ್ದಾರೆ. ಏನನ್ನೂ ಸಾಧಿಸಿಲ್ಲ ಎಂದರು.
ಕಾಂಗ್ರೆಸ್ ಮುಖಂಡರಾದ ಕೋಟೆಹುಂಡಿ ಮಹದೇವ್, ಗೋಪಿನಾಥ್, ಆನಂದ್, ಶಿವನಾಗಪ್ಪ ಇದ್ದರು.