ಜಿಲ್ಲೆ

ಹಗರಣದಿಂದ ಬಿಜೆಪಿ ಮೇಲೆ ಪರಿಣಾಮ ಇಲ್ಲ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿ ಹಾಗೂ ರಾಜ್ಯದಲ್ಲಿ ಕೇಂದ್ರದಿಂದ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತದಾರರು ಬಿಜೆಪಿಗೆ ಮತ ಹಾಕುತ್ತಾರೆ. ಯಾವುದೇ ರೀತಿಯ ಹಗರಣಗಳು ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಮೇಲೆ ದುಷ್ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ ರೇವಣ್ಣ ಪೆನ್​ಡ್ರೖೆವ್ ಹಗರಣದ ಕುರಿತು ಪ್ರತಿಕ್ರಿಯೆ ನೀಡಿದರು.

ಹಗರಣದ ತನಿಖೆಯನ್ನು ಈಗಾಗಲೇ ಎಸ್​ಐಟಿಗೆ ನೀಡಲಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಈ ಹಗರಣಕ್ಕೆ ಬಿಜೆಪಿಯನ್ನು ಹೊಣೆ ಮಾಡುವುದು ಸರಿ ಅಲ್ಲ ಎಂದರು.

ಹಗರಣಕ್ಕೂ, ಬಿಜೆಪಿಗೂ ಸಂಬಂಧ ಕಲ್ಪಿಸುವುದು ಸರಿ ಅಲ್ಲ. ಕಾಂಗ್ರೆಸ್​ನವರಿಗೆ ಇದು ಶೋಭೆ ತರುವುದಿಲ್ಲ. ಇದರಲ್ಲಿ ರಾಜಕಾರಣ ಮಾಡುವುದು ಸರಿ ಅಲ್ಲ ಎಂದು ಹೇಳಿದರು.