ಮಸ್ಕಿ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿದರು. ಪ್ರಮುಖರಾದ ಶರಣಯ್ಯ ಸೊಪ್ಪಿಮಠ, ಮಲ್ಲಯ್ಯ ಅಂಬಾಡಿ, ಮಲ್ಲಪ್ಪ ಅಂಕುಶದೊಡ್ಡಿ ಇದ್ದರು. 
ಜಿಲ್ಲೆ

ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಬಿಜೆಪಿ

ಮಸ್ಕಿ: ಭಾರತೀಯ ಜನತಾ ಪಕ್ಷ ಜಗತ್ತಿನ ಅತಿದೊಡ್ಡ ಪಕ್ಷವಾಗಿದೆ. ದೇಶದ ಜನರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ದುಡಿಯುತ್ತಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನ ಸಂಘದ ಹೆಸರಿನಲ್ಲಿ ಆರಂಭವಾದ ಪಕ್ಷವನ್ನು ವಾಜಪೇಯಿ, ಆಡ್ವಾಣಿ, ಮುರಳಿಮನೋಹರ ಜೋಶಿಯಂತಹ ನಾಯಕರು ಭಾರತೀಯ ಜನತಾ ಪಾರ್ಟಿ ಎಂದು ಹೊಸ ಹೆಸರು ನಾಮಕರಣ ಮಾಡಿದ್ದು, ಭಾರತದ ಅಖಂಡತೆಗಾಗಿ ಶ್ರಮಿಸುವ ಏಕೈಕ ಪಕ್ಷವಾಗಿದೆ.

ವಿಕಸಿತ ಭಾರತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕಂಡ ಕನಸನ್ನು ನನಸು ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಪ್ರಮುಖ ಮಲ್ಲಪ್ಪ ಅಂಕುಶದೊಡ್ಡಿ, ಬಿಜೆಪಿ ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ ಮಾತನಾಡಿದರು. ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಸದಸ್ಯರಾದ ಮಲ್ಲಿಕಾರ್ಜುನ ಬ್ಯಾಳಿ, ಎಸ್ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮೌನೇಶ ನಾಯಕ, ಪ್ರಮುಖರಾದ ಶ್ರೀನಿವಾಸ ಇಲ್ಲೂರು, ಅಶೋಕ ಠಾಕೂರು, ಯಮನಪ್ಪ ಭೋವಿ, ಆದಯ್ಯಸ್ವಾಮಿ ಕ್ಯಾತ್ನಟ್ಟಿ, ಪಂಪಣ್ಣ ಮಡಿವಾಳ, ಗದ್ದೆಪ್ಪ ಮಡಿವಾಳ, ರಾಘವೇಂದ್ರ ಮೋಚಿ ಇತರರಿದ್ದರು.