ಉಡುಪಿ: ಪಕ್ಷದ ಹಿರಿಯರು ವಿಧಾನ ಪರಿಷತ್ಗೆ ಸ್ಪರ್ಧಿಸುವ ಅವಕಾಶ ನೀಡಿದ್ದಾರೆ. ವೈದ್ಯನಾಗಿ ಜನರ ನೋವು-ಕಷ್ಟಗಳನ್ನು ಅರ್ಥ ಮಾಡಿಕೊಂಡಿದ್ದು, ಸಮಾಜದ ಕೆಲಸ ಮಾಡುವ ಆಸೆ ಇದೆ. ಪ್ರಜ್ಞಾವಂತ ಪದವೀಧರ ಮತದಾರರು ಬೆಂಬಲಿಸುವ ವಿಶ್ವಾಸವಿದೆ. ಮೇ 16ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹೇಳಿದರು.
ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ 14 ಮೆಡಿಕಲ್ ಕಾಲೇಜು, 30 ಇಂಜಿನಿಯರಿಂಗ್ ಕಾಲೇಜು, 100 ಉನ್ನತ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಅತೀ ಹೆಚ್ಚು ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಿದೆ. ಸಾರಿಗೆ ಸಂಪರ್ಕ ವ್ಯವಸ್ಥೆ ಅತ್ಯುತ್ತಮವಾಗಿದೆ. ಈಗಾಗಲೇ 82 ಸಾವಿರ ಮಂದಿ ಪದವೀಧರರು ನೋಂದಾಯಿಸಿಕೊಂಡಿದ್ದು, ಪಕ್ಷದ ಕಾರ್ಯವೈಖರಿಯನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿದ್ದು, ಸಂಟನೆಗೆ ಶಕ್ತಿ ಇರುವ ಕ್ಷೇತ್ರವಾಗಿದೆ ಎಂದರು.
ವಿಟ್ಲದ ಅಳಿಕೆಯಲ್ಲಿ ಪಿಯುಸಿ ಶಿಕ್ಷಣ ಹಾಗೂ ಮಣಿಪಾಲ ಕೆಎಂಸಿಯಲ್ಲಿ ವೈದ್ಯಕಿಯ ಸ್ನಾತಕೋತ್ತರ ಪದವಿ ಪಡೆದಿದ್ದು, ಶಿವಮೊಗ್ಗದಲ್ಲಿ ನಮ್ಮ 5&6 ಶಿಕ್ಷಣಸಂಸ್ಥೆ ಸ್ಥಾಪಿಸಿರುವುದರಿಂದ 3 ಜಿಲ್ಲೆಗಳ ಸಂಪರ್ಕ ಹೊಂದಿದ್ದೇನೆ. ನಮ್ಮ ಸಂಸ್ಥೆಯಲ್ಲಿ 1 ಸಾವಿರಕ್ಕೂ ಅಧಿಕ ಮಂದಿ ಉದ್ಯೋಗಿಗಳಿದ್ದು, 100ಕ್ಕೂ ಅಧಿಕ ಮಂದಿ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
10ನೇ ವರ್ಷದಿಂದ ಸ್ವಯಂಸೇವಕ
10ನೇ ವಯಸ್ಸಿನಿಂದ ನಾನು ಸ್ವಯಂಸೇವಕನಾಗಿದ್ದೇನೆ. ಪುತ್ತೂರಿನಲ್ಲಿ ಒಟಿಸಿ ಮುಗಿಸಿದ್ದೇನೆ. ಶಾಖೆಯಲ್ಲಿ ಮುಖ್ಯಶಿಕ್ಷಕನಾಗಿಯೂ ಸೇವೆ ಸಲ್ಲಿಸಿದ್ದೆ. ಆರೆಸ್ಸೆಸ್ ಅಥವಾ ಬಿಜೆಪಿ ವಿರುದ್ಧ ಯಾವುದೇ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ. ಈ ಹಿಂದೆ ಶಿವಮೊಗ್ಗದಲ್ಲಿ ಗಲಾಟೆ ಹಾಗೂ ಕೊಲೆ ನಡೆದಿತ್ತು. ಈ ಸಂದರ್ಭದಲ್ಲಿ ಸಮಾಜಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಧರ್ಮದ ಗುರುಗಳು ಸೇರಿ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದರು. ಆ ಸಭೆಯಲ್ಲಿ ನಾನೂ ಪಾಲ್ಗೊಂಡಿದ್ದೆ ಎಂದು ಸ್ಪಷ್ಟನೆ ನೀಡಿದರು.
22,000 ಶಿಕ್ಷಕರ ನೋಂದಣಿ
ನೈಋತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮಾತನಾಡಿ, ಬಿಜೆಪಿ&ಜೆಡಿಎಸ್ ಹೊಂದಾಣಿಕೆ ಲೋಕಸಭಾ ಚುನಾವಣೆ ಬಳಿಕ ವಿಧಾನ ಪರಿಷತ್ ಚುನಾವಣೆಯಲ್ಲೂ ಮುಂದುವರಿದಿದೆ. ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಬಲಾಢ್ಯವಾಗಿದ್ದು, ಜೆಡಿಎಸ್ ಗೆಲುವಿಗೆ ಪೂರಕ ವಾತಾವರಣವಿದೆ. ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ 22,000 ಮಂದಿ ಶಿಕ್ಷಕರು ನೋಂದಾಯಿಸಿಕೊಂಡಿದ್ದಾರೆ ಎಂದರು.
ನಿಷ್ಪಕ್ಷಪಾತ ತನಿಖೆ ಅಗತ್ಯ
ಹೆಣ್ಮಕ್ಕಳ ವಿಚಾರದಲ್ಲಿ ಗೌಪ್ಯತೆ ಕಾಪಾಡುವುದು ಪ್ರತಿ ನಾಗರಿಕನ ಕರ್ತವ್ಯ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಾಾಧಾರಗಳನ್ನು ಸಂಬಂಧಪಟ್ಟ ತನಿಖೆ ಸಂಸ್ಥಗಳಿಗೆ ನೀಡಿ, ತಪ್ಪಿತಸ್ಥರಿಗೆ ಶಿೆ ಕೊಡಿಸಬೇಕಿತ್ತು. ಅದನ್ನು ಹೊರತು ಪಡಿಸಿ ಹೀಗೆ ಎಲ್ಲೆಂದರಲ್ಲಿ ಪೆನ್ಡೆವ್ ಹಂಚಿರುವುದು ಅಕ್ಷಮ್ಯ ಎಂದರು.
ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಪ ಸದಸ್ಯ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಸುರೇಶ್ ನಾಯಕ್ ಕುಯಿಲಾಡಿ, ದಿನಕರ ಶೆಟ್ಟಿ ಹೆರ್ಗ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.