ಜಿಲ್ಲೆ

ಬಿಜೆಪಿ ಮುಖಂಡ ಮಣಿಕಂಠ ನ್ಯಾಯಾಂಗ ವಶಕ್ಕೆ ; ಕಲಬುರಗಿ ಸೆಂಟ್ರಲ್ ಜೈಲಿಗೆ ರವಾನೆ

ಬಾಬುರಾವ ಯಡ್ರಾಮಿ


ವಿಜಯವಾಣಿ ಸುದ್ದಿಜಾಲ  ಕಲಬುರಗಿ
ಬಿಜೆಪಿ ಮುಖಂಡ ಮಣಿಕಂಠ ರಾಠೋಡರನ್ನು ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಬಂಧಿಸಿ ನಂತರ ಜಾಮೀನು ಮೇಲೆ ಬಿಡುಗಡೆ ಮಾಡಿದ್ದರು.
ಯುವಕನ ಸಾವಿನ ಪ್ರಕರಣಕ್ಕೆ ಸಂಬAಧಿಸಿದAತೆ ಮಾಡಬೂಳ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದಾಗ ಪೊಲೀಸರು ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಬಂಧಿಸಿದ್ದರು. ಬಳಿಕ ಜಾಮೀನು ಮೇಲೆ ಬಿಡುಗಡೆ ಮಾಡಿದ್ದರು. ಆ ಕಾಲಕ್ಕೆ ವಿಧಿಸಿದ್ದ  ಷರತ್ತು ಉಲ್ಲಂಘನೆ ಮಾಡಿದ ಆರೋಪದ ಹಿನ್ಲೆಯಲ್ಲಿ ಮತ್ತು  ಕಲಬುರಗಿಯ ವಿಶ್ವವಿದ್ಯಾಲಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಬಂಧಿಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ.
ಮಣಿಕಂಠ ರಾಠೋಡರನ್ನು ಮೊದಲು ವಿಚಾರಣೆಗೆ ಕರೆದು ಬಳಿಕ ಬಂಧಿಸಿದ್ದಾರೆ. ಗುರುವಾರವಷ್ಟೆ ಸುದ್ದಿಗೋಷ್ಠಿ ನಡೆಸಿ  ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು.
ಪೊಲೀಸರು ಬಂಧಿಸಿದ ಬಳಿಕ ಚಿತ್ತಾಪುರಕ್ಕೆ ಕರೆ ತಂದು ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿದರು.ಬಳಿಕ ನ್ಯಾಯಾಧೀಶರ ಮುಂದೆ ಹಾಜಪರಿಡಿಸಿದರು. ಆಗ ನ್ಯಾಯಾಧೀಶರು ವಿಚಾರಣೆ ನಡೆಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶಿಸಿದರು. ನಂತರ ಮತ್ತೊಂದು ಸಲ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಕಲಬುರಗಿಯ ಸೆಂಟ್ರಲ್ ಜೈಲಿಗೆ ತಡರಾತ್ರಿ ಕರೆ ತಂದು ಬಿಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.