ಜಿಲ್ಲೆ

ಕಾಂಗ್ರೆಸ್​ ಕಾರ್ಯಕ್ರಮದಲ್ಲಿ ಬಿಜೆಪಿಯ ಎಸ್​.ಎಂ.ಕೃಷ್ಣ ಫೋಟೋ!

Webdesk - Ravikanth

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಇಂದು ಎಂ.ಬಿ. ಪಾಟೀಲ್ ಅಧಿಕಾರ ಸ್ವೀಕರಿಸಿದ್ದು, ಆ ಸಮಾರಂಭದಲ್ಲಿ ಪಕ್ಷದ ಮುಖಂಡರು ಮುಜುಗರ ಅನುಭವಿಸುವಂಥ ಪ್ರಸಂಗವೊಂದು ನಡೆದಿದೆ.

ಎಂ.ಬಿ. ಪಾಟೀಲ್ ಅವರು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪದಗ್ರಹಣ ಮಾಡುವ ಸಮಾರಂಭವನ್ನು ಇಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಆಯೋಜಿಸಲಾಗಿದೆ. ಅಲ್ಲದೆ ಇದರಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ, ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಹಲವಾರು ಮುಖಂಡರು ಉಪಸ್ಥಿತರಿದ್ದಾರೆ.

ಆದರೆ ಈ ಸಂದರ್ಭದಲ್ಲೇ ಪಕ್ಷದ ಘಟಾನುಘಟಿ ಮುಖಂಡರು ಮುಜುಗರ ಅನುಭವಿಸುವಂಥ ಪರಿಸ್ಥಿತಿ ಉಂಟಾಗಿತ್ತು. ಅದೇನೆಂದರೆ, ವೇದಿಕೆ ಮೇಲೆ ಹಾಕಲಾಗಿದ್ದ ಎಲ್​ಇಡಿ ಡಿಸ್​ಪ್ಲೇನಲ್ಲಿ ಕಾಂಗ್ರೆಸ್​ನ ವರಿಷ್ಠರು ಮತ್ತು ನಾಯಕರ ಜತೆಗೆ, ಪ್ರಸ್ತುತ ಬಿಜೆಪಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರ ಫೋಟೋ ಕೂಡ ಪ್ರಸಾರವಾಗಿದೆ. ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಹೀಗೆ ಬಿಜೆಪಿ ನಾಯಕರ ಫೋಟೋ ಪ್ರಸಾರಗೊಂಡಿದ್ದು ಇರಿಸುಮುರಿಸು ಉಂಟಾಗಿಸಿದೆ.