ಜಿಲ್ಲೆ

ಬಲಿಷ್ಠ ಭಾರತ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ವದ್ದು -ಎಂಎಲ್‌ಸಿ ಪ್ರತಾಪ್‌ಸಿಂಹ ನಾಯಕ್

Mangaluru - Hariprasad Rai




ಮಂಗಳೂರು : ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದರು.
ದ.ಕ.ಜಿಲ್ಲಾ ಬಿಜೆಪಿಯ ಚುನಾವಣಾ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು ‘
ವಕೀಲರ ಮಾತಿಗೆ ಸಮಾಜದಲ್ಲಿ ತೂಕ ಹೆಚ್ಚು. ಅವರ ಸಲಹೆಗಳನ್ನು ಮೀರುವ ವ್ಯಕ್ತಿಗಳು ಯಾರೂ ಇಲ್ಲ. ಭಾರತದ ಸ್ವಾತಂತ್ರ್ಯ ಹೋರಾಟ ಕಾಲದಲ್ಲಿ ಸಾವಿರಾರು ವಕೀಲರು ದಿಟ್ಟತನದಿಂದ ಕಾರ್ಯನಿರ್ವಹಿಸಿದ್ದರ ಫಲವಾಗಿಯೇ ಸ್ವಾತಂತ್ರೃದ ದ ಕಿಚ್ಚು ಎಲ್ಲೆಡೆ ಹಬ್ಬಿತು’ ಎಂದರು.
ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಆಡಳಿತದ ಮರುಸ್ಥಾಪನೆಗೆ ನಡೆದ ಹೋರಾಟದಲ್ಲೂ ವಕೀಲರ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಈಗ ಸ್ವತಂತ್ರ ಭಾರತ ಇನ್ನೊಂದು ಮಹತ್ವದ ಮಜಲಿನಲ್ಲಿ ಬಂದು ನಿಂತಿದೆ. ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ವಿಕಸಿತ ಭಾರತದ ಕನಸು ಕಾಣುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ವಕೀಲರ ಸಮುದಾಯ ತಮ್ಮ ಯೋಗದಾನವನ್ನು ನೀಡಬೇಕಿದೆ ಎಂದು ಪ್ರತಾಪ್‌ಸಿಂಹ ನಾಯಕ್ ಹೇಳಿದರು.
ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ ‘ ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿಯ ಮಹಾ ಪರ್ವ
ಆರಂಭವಾಗಿದೆ ಎಂದರು.
ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಎಂಎಲ್‌ಸಿ ಕೆ.ಮೋನಪ್ಪ ಭಂಡಾರಿ, ವಕೀಲರಾದ ಶಂಭು ಶರ್ಮ, ಸುಧಾಕರ ಜೋಶಿ, ಪ್ರಕೋಷ್ಠಗಳ ಜಿಲ್ಲಾ ಸಂಚಾಲಕ ಪ್ರಸನ್ನ ದರ್ಭೆ ಉಪಸ್ಥಿತರಿದ್ದರು.