ಜಿಲ್ಲೆ

ಮಹಿಳೆಯರನ್ನು ಹೀಯಾಳಿಸುವುದೇ ಕಾಂಗ್ರೆಸ್ ಸಂಸ್ಕೃತಿ - ಮಂಜುಳಾ ರಾವ್

Mangaluru - Hariprasad Rai




ಮಂಗಳೂರು : ಮಹಿಳಾ ಶಕ್ತಿಯನ್ನು ಅವಮಾನಿಸಿ ಅಗೌರವಿಸುವುದೇ ಕಾಂಗ್ರೆಸ್ ಸಂಸ್ಕೃತಿ ಎಂದು ದ.ಕ.ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್ ಹೇಳಿದರು.
ಬಿಜೆಪಿ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವರು ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಸಚಿವ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರ ಬಗ್ಗೆ ಆಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿದರು.
ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಮಹಿಳೆಯರಿಗೆ ಅವಮಾನ, ಅತ್ಯಾಚಾರದಂತಹ ಕೃತ್ಯಗಳು ಹೆಚ್ಚಾಗುತ್ತವೆ. ಅಂತಹ ದುರುಳರಿಗೆ ಕಾಂಗ್ರೆಸ್ ಸರ್ಕಾರದ ಶ್ರೀರಕ್ಷೆ ಇರುವುದು ಇಂತಹ ಕೃತ್ಯಗಳು ಹೆಚ್ಚಲು ಕಾರಣ ಎಂದು ಹೇಳಿದರು.
ಮಹಿಳೆಯರು ಅಡುಗೆ ಮನೆಗೆ ಮಾತ್ರ ಸೀಮಿತವಾಗಿಲ್ಲ. ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರ ಮೀಸಲಾತಿ ನೀಡಿರುವುದು ಬಿಜೆಪಿ ಸರಕಾರ. ಹಿಂದೆ ವಿದೇಶಾಂಗ ಸಚಿವೆಯಾಗಿ ಅತ್ಯಂತ ಸಮರ್ಥವಾಗಿ ಕೆಲಸ ಮಾಡಿದವರು ಸುಷ್ಮಾ ಸ್ವರಾಜ್ ಬಿಜೆಪಿ ನಾಯಕಿಯಾಗಿದ್ದರು. ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯಕ್ಕೆ ಮಹಿಳೆಯೊಬ್ಬರನ್ನು ರಾಷ್ಟ್ರಪತಿ ಹುದ್ದೆಗೆ ಆಯ್ಕೆ ಮಾಡಿರುವುದು ಬಿಜೆಪಿ ಎಂದು ಅವರು ಹೇಳಿದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಉಪ ಮೇಯರ್ ಸುನೀತಾ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಕೋಶಾಧಿಕಾರಿ ಸುಮನ ಶರಣ್ , ಅಶಿತಾ ಶೆಟ್ಟಿ ಉಪಸ್ಥಿತರಿದ್ದರು.