ಜಿಲ್ಲೆ

ಸಂಸ್ಕೃತಿ ಬೆಳೆಸುವಲ್ಲಿ ಮಹಿಳೆಯರದ್ದು ಮುಖ್ಯ ಪಾತ್ರ

ಉಡುಪಿ: ಹಿಂದೂ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಮಹಿಳೆಯರು ಮುಖ್ಯ ಪಾತ್ರ ವಹಿಸುತ್ತಿದ್ದು, ನಮ್ಮ ಆಚಾರ, ವಿಚಾರವನ್ನು ಯುವಪೀಳಿಗೆಗೆ ತಲುಪಿಸಬೇಕು ಎಂದು ಶಾಸಕ ಯಶ್​ಪಾಲ್​ ಎ. ಸುವರ್ಣ ಹೇಳಿದರು.

ಕುಂಜಿಬೆಟ್ಟಿನ ಶಾರದಾ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಡೆದ ಶ್ರಾವಣ ಸಂಭ್ರಮ ಅರಶಿನ ಕುಂಕುಮ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಪಕ್ಷ ಸಂಟನೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​ ಮಾತನಾಡಿ, ಮಹಿಳೆಯರಿಗೆ ಆಡಳಿತದಲ್ಲಿಯೂ ಸಮಪಾಲು ದೊರೆಯಬೇಕು. ಇದರಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಹೇಳಿದರು. ಕಾಪು ಶಾಸಕ ಸುರೇಶ್​ ಶೆಟ್ಟಿ ಗುರ್ಮೆ ಮಾತನಾಡಿದರು. ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್​, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್​ ಶೆಟ್ಟಿ, ಬಿಜೆಪಿ ಹಿರಿಯ ನಾಯಕಿ ಶೀಲಾ ಕೆ. ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್​. ಕುಂದರ್​, ವೀಣಾ ಶೆಟ್ಟಿ, ರೇಶ್ಮಾ ಉದಯ ಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್​ ಮೊದಲಾದವರು ಉಪಸ್ಥಿತರಿದ್ದರು. ಮಾಯಾ ಕಾಮತ್​ ವಂದೇ ಮಾತರಂ ಹಾಡಿದರು. ಬಿಜೆಪಿ ಮಹಿಳಾ ಮೋಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದಿಪ್​ ರಾವ್​ ಸ್ವಾಗತಿಸಿ, ತಾರಾ ಆಚಾರ್ಯ ನಿರೂಪಿಸಿದರು. ಈ ಸಂದರ್ಭದಲ್ಲಿ ಭಾರತಾಂಬೆ ಹಾಗೂ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.