ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಏ.15ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋನಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣದ ಪ್ರಮುಖರ ಪೂರ್ವಭಾವಿ ಸಭೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ‘ ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರಚಾರ ಭರದಿಂದ ಸಾಗಿವೆ. ಇಂತಹ ಸಂದರ್ಭದಲ್ಲಿ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವುದು ಇಡೀ ಜಿಲ್ಲೆಯ ಪಕ್ಷದ ಪ್ರಮುಖರಾದಿಯಾಗಿ ಕಾರ್ಯಕರ್ತ ಬಂಧುಗಳಲ್ಲಿ ಮಿಂಚಿನ ಸಂಚಲನ ಮೂಡಿಸಿದೆ. ನಾವೆಲ್ಲರೂ ಸರ್ವ ರೀತಿಯ ಜವಾಬ್ದಾರಿಗಳನ್ನು ವಹಿಸಿಕೊಂಡು ನಮೋ ರೋಡ್ ಶೋ ಸಂಪೂರ್ಣ ಯಶಸ್ಸಿಗೆ ಸಹಕರಿಸ ಬೇಕು ಎಂದರು.
ಪಕ್ಷದ ಪ್ರಮುಖರಾದ ರಮೇಶ್ ಕಂಡೆಟ್ಟು, ವಿಜಯಕುಮಾರ್ ಶೆಟ್ಟಿ, ಮೋನಪ್ಪ ಭಂಡಾರಿ, ರಾಕೇಶ್ ರೈ ಉಪಸ್ಥಿತರಿದ್ದರು.