ಜಿಲ್ಲೆ

ಬಿಜೆಪಿ ಘಟ ನಾಯಕರ ಸಭೆ

Mangaluru - Hariprasad Rai




ಮಂಗಳೂರು : ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಘಟ ನಾಯಕರ ಸಭೆ ಅಧ್ಯಕ್ಷ ರಮೇಶ ಕಂಡೆಟ್ಟು ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿಯಾದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್,ಶಿಕ್ಷಕರ ಕ್ಷೇತ್ರದ ಸಂಚಾಲಕ ರಘುವೀರ್ ಬಾಬುಗುಡ್ಡ, ಪದವೀಧರ ಕ್ಷೇತ್ರದ ಸಂಚಾಲಕ ಜಯ ಕುಮಾರ್ , ಮಂಗಳೂರು ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ ಉಪಸ್ಥಿತರಿದ್ದರು.