ಜಿಲ್ಲೆ

ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ: ವಿಜಯೇಂದ್ರ

ಗೋಪಾಲಕೃಷ್ಣ ಪಾದೂರ್

ಉಡುಪಿ: ಪ್ರಸ್ತುತ ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತಗೊಂಡಿದ್ದು, 1 ವರ್ಷದ ಅವಧಿಯಲ್ಲಿ ಮುಖ್ಯಮಂತ್ರಿ ಆದಿಯಾಗಿ ಯಾವುದೇ ಸಚಿವರು ಅಭಿವೃದ್ಧಿ ಕಾರ್ಯಕ್ಕೆ ಗುದ್ದಲಿ ಪೂಜೆ ನಡೆಸಿದ ಉದಾಹರಣೆಗಳಿಲ್ಲ. ಕಡಿಮೆ ಅವಧಿಯಲ್ಲಿ ರಾಜ್ಯ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸೋಮವಾರ ಜಿಲ್ಲಾ ಬಿಜೆಪಿ ವತಿಯಿಂದ ನೈಋತ್ಯ ಪದವೀಧರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಘಟನಾಯಕರ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಮಾತನಾಡಿದರು.

ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಶ್ರಮ ವ್ಯರ್ಥವಾಗೋದಿಲ್ಲ. ಉತ್ತಮ ಪಲಿತಾಂಶ ಬರುತ್ತದೆ. ಉಡುಪಿ ಜಿಲ್ಲೆ ಸಂಟನೆ ಶಕ್ತಿ ಇರುವ ಜಿಲ್ಲೆ. ಸಾಕಷ್ಟು ಜನ ಪದವೀಧರ ಕ್ಷೇತ್ರಕ್ಕೆ ಆಕಾಂಗಳಿದ್ದರು. ಆದರೆ ಎಲ್ಲರೂ ಪಕ್ಷದ ತೀರ್ಮಾನ ಒಪ್ಪಿದ್ದಾರೆ. ಯಾವುದೇ ಸ್ಥಾನಮಾನದ ಅಪೇೆ ಇಲ್ಲದೆ ತನು&ಮನ&ಧನ ಅರ್ಪಿಸಿ ಪಕ್ಷಕ್ಕಾಗಿ ಕೆಲಸ ಮಾಡುವವರು ಅನೇಕ ಮಂದಿ ಹಿರಿಯರಿದ್ದಾರೆ. ಪಕ್ಷದ ಅಭ್ಯರ್ಥಿ ಗೆದ್ದರೆ ತಾನೇ ಗೆದ್ದಂತೆ ಎಂಬುದಾಗಿ ಸಂಭ್ರಮಿಸುತ್ತಾರೆ.  ಕೆಲವರು ಸಂಟನೆ ಹೊರತಾಗಿ ಸ್ವಾರ್ಥದಿಂದ ಯೋಚನೆ ಮಾಡಿದಾಗ ಅನಾಹುತಗಳಾಗುತ್ತವೆ. ನನ್ನಿಂದಲೇ ಪಕ್ಷ ಎಂಬ ಭ್ರಮೆ ಸಲವಾಗುವುದಿಲ್ಲ ಎಂದರು.

ಕರ್ನಾಟಕದಲ್ಲಿ ಮಾತ್ರ ಬಿಜೆಪಿ ಬಲಿಷ್ಠ
ತಮಿಳುನಾಡು, ತೆಲಂಗಾಣ, ಅಂಧ್ರಪ್ರದೇಶ, ಕೇರಳ ಸಹಿತ ದಣದ ರಾಜ್ಯಗಳಲ್ಲಿ ಬಿಜೆಪಿ ಸಂಟನೆ ಬಲಿಷ್ಠವಾಗಿಲ್ಲ. ಆದರೆ ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ಹಳ್ಳಿಗಳಿಗೆ ತೆರಳಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ಅನಂತಕುಮಾರ್ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಕಟ್ಟಿದ್ದಾರೆ. ಇದರಲ್ಲಿ ಅನೇಕ ಕಾರ್ಯಕರ್ತರ ತಪಸ್ಸು ಇದೆ. ಡಾ.ವಿ.ಎಸ್. ಆಚಾರ್ಯ ಅವರ ಪರಿಶ್ರಮದಿಂದ ಬಿಜೆಪಿ ಜಿಲ್ಲೆಯಲ್ಲಿ ಬೆಳೆದಿದೆ.

ಕರಾವಳಿಗೆ ಶಿಕ್ಷಕರ ಕ್ಷೇತ್ರ ನೀಡಬೇಕಿತ್ತು
ಮಲೆನಾಡಿಗೆ ಪದವೀಧರ ಕ್ಷೇತ್ರ ನೀಡಿರುವುದರಿಂದ ಶಿಕ್ಷಕರ ಕ್ಷೇತ್ರದಲ್ಲಿ ಕರಾವಳಿ ಭಾಗ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಪಕ್ಷದ ವರಿಷ್ಠರು ಮೈತ್ರಿ ಪಕ್ಷ ಜೆಡಿಎಸ್ಗೆ ಈ ಕ್ಷೇತ್ರ ಬಿಟ್ಟುಕೊಡಲು ತೀರ್ಮಾನಿಸಿದ್ದರು. ಹೀಗಾಗಿ ಯಾವುದೇ ಸಮಸ್ಯೆ, ವೈಮನಸ್ಸು ಬದಿಗಿಟ್ಟು ಶ್ರಮವಹಿಸಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಮುಂದಿನ ದಿನಗಳಲ್ಲಿ ಜಿಪಂ, ತಾಪಂ ಚುನಾವಣೆ ಬರಲಿದ್ದು, ಪಕ್ಷದ ಶಾಸಕರು ಕಾರ್ಯಕರ್ತರನ್ನು ಗೆಲ್ಲಿಸಲು ತಯಾರಾಗಬೇಕು ಎಂದರು.

ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮಾತನಾಡಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ,  ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜಾ, ವಿಪ ಸದಸ್ಯ ಡಿ.ಎಸ್. ಅರುಣ್, ಮಾಜಿ ಶಾಸಕ ಲಾಲಾಜಿ ಮೆಂಡನ್, ಪ್ರಮೋದ್ ಮಧ್ವರಾಜ್ ಮೊದಲಾದವರು ಉಪಸ್ಥಿತರಿದ್ದರು. ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು.