ವಿಜಯವಾಣಿ ಸುದ್ದಿಜಾಲ ಕೋಟ
ಇಲ್ಲಿನ ಮಾಂಗಲ್ಯ ಮಂದಿರದಲ್ಲಿ ಕೋಟ ಬಿಜೆಪಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಾಗಾರ ಶುಕ್ರವಾರ ನಡೆಯಿತು.
ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ 6ಲಕ್ಷ ಸದಸ್ಯತ್ವ ಮಾಡುವುದರ ಜತೆಗೆ ಪ್ರತಿ ಬೂತ್‌ನಲ್ಲೂ 300 ಸದಸ್ಯತ್ವ ನೋಂದಣಿಗೊಳಿಸುವ ಗುರಿ ಹೊಂದಬೇಕು ಎಂದು ಹೇಳಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಸದಸ್ಯತ್ವ ಅಭಿಯಾನದ ಬಗ್ಗೆ ತಿಳಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿದ್ದರು. ಅಭಿಯಾನದ ಸಂಚಾಲಕ ಕಾಡೂರು ಸುರೇಶ್ ಶೆಟ್ಟಿ, ಕುಂದಾಪುರ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆಎಸ್, ಸಹ ಸಂಚಾಲಕ ಸದಾನಂದ ಬಳ್ಕೂರು, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ ಹೆಗ್ಡೆ, ಮುಖಂಡ ಶಾಂತಾರಾಂ ಶೆಟ್ಟಿ, ಕೋಟ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬಿಜೆಪಿಯ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಸುರೇಶ್ ಕುಂದರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ ವಂದಿಸಿದರು.