ಗುಂಡ್ಲುಪೇಟೆ: ತಾಲೂಕಿನ ಪ್ರತಿ ಗ್ರಾಮಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿಸುವಂತೆ ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ಕಾರ್ಯಕರ್ತರಿಗೆ ಕರೆ ನೀಡಿದರು.
ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಶನಿವಾರ ತೆರಕಣಾಂಬಿ ಮಹಾ ಶಕ್ತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು. ಬಳಿಕ ಅವರು ಬಿಜೆಪಿ ಸದಸ್ಯತ್ವ ಅಭಿಯಾನದ ಸಭೆಗಳನ್ನು ನಡೆಸಿ ಸದಸ್ಯತ್ವ ಅಭಿಯಾನದ ಬಗ್ಗೆ ಮಾರ್ಗದರ್ಶನ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‌ಕುಮಾರ್, ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಂಡಲದ ಪ್ರಮುಖರು ಮತ್ತು ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.