ಜಿಲ್ಲೆ

ಬಿಜೆಪಿ ರಾಜ್ಯ ಕಚೇರಿಯಲ್ಲಿ 'ಅರುಣೋದಯ' !

ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಭಾನುವಾರ 'ಅರುಣೋದಯ' ವಾಯಿತು ! ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸದ ಹಾಗೂ ಪಕ್ಷದ ರಾಜ್ಯ ನೂತನ ಉಸ್ತುವಾರಿ ಅರುಣ್ ಸಿಂಗ್ ಮೊದಲ ಬಾರಿಗೆ ಕಚೇರಿಗೆ‌ ಆಗಮಿಸಿದಾಗ ಸಡಗರ-ಸಂಭ್ರಮ ಉಕ್ಕಿಹರಿಯಿತು.

ಪೂರ್ಣಕುಂಭ ಸ್ವಾಗತ, ಆರತಿ ಬೆಳಗಿ, ಪುಷ್ಪವೃಷ್ಟಿಗರೆದು ಆತ್ಮಯವಾಗಿ ಆಹ್ವಾನಿಸಿದರು. ಮಹಿಳೆಯರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಕಿಕ್ಕಿರಿದು ನೆರೆದಿದ್ದರು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವ ಕೆ.ಗೋಪಾಲಯ್ಯ ಸ್ವಾಗತಿಸಿಕೊಂಡರು. ಕಚೇರಿಯಲ್ಲಿ ಅರುಣ್ ಸಿಂಗ್ ಅವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತ್ಮೀಯವಾಗಿ ಬರಮಾಡಿಕೊಂಡರು.