ಜಿಲ್ಲೆ

ತೃತೀಯಹಂತದ ನಾಯಕತ್ವ ಬೆಳೆಸುವ ಗುರಿ

ಗೋಪಾಲಕೃಷ್ಣ ಪಾದೂರ್

ಉಡುಪಿ: ಬೂತ್​ ಮಟ್ಟದಲ್ಲಿ ಪಕ್ಷ$ವನ್ನು ಸದೃಢಗೊಳಿಸಲಾಗುವುದು. ಜೊತೆಗೆ ತೃತೀಯ ಹಂತದ ನಾಯಕತ್ವ ಬೆಳೆಸುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್​ ಶೆಟ್ಟಿ ಹೇಳಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹೊಸ ಜವಾಬ್ದಾರಿ ಸ್ವೀಕರಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಬಿಜೆಪಿ ಸದೃಢವಾಗಿದೆ. 23 ರಿಂದ 32 ವರ್ಷ ವಯೋಮಾನದ ಕಾರ್ಯಕರ್ತರಿಗೆ ಪಕ್ಷದ ಜವಾಬ್ದಾರಿ ನೀಡುವ ಮೂಲಕ ಯುವ ನಾಯಕತ್ವಕ್ಕೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಲಾಗುವುದು ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ವಿ. ಸುನೀಲ್​ ಕುಮಾರ್​ ಮಾತನಾಡಿ, ಕಾಂಗ್ರೆಸ್​ ಪಕ್ಷದಂತೆ ನೂರಾರು ಮಂದಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಸಂಪ್ರದಾಯ ಬಿಜೆಪಿಯಲ್ಲಿ ಇಲ್ಲ. ಹೀಗಾಗಿ ಎಲ್ಲರಿಗೂ ಸ್ಥಾನಮಾನ ಕಷ್ಟಸಾಧ್ಯ. ಇದನ್ನು ಕಾರ್ಯಕರ್ತರು ಅರ್ಥಮಾಡಿಕೊಂಡು ಪಕ್ಷ ಸಂಟನೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಜ್ಯ ಸರ್ಕಾರದ ವೈಲ್ಯಗಳನ್ನು ಜನರಿಗೆ ತಲುಪಿಸುವ ಜೊತೆಗೆ ತಾಪಂ, ಜಿಪಂ ಹಾಗೂ ಮುಂದಿನ ವಿಧಾನ ಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಶಾಸಕರಾದ ಗುರ್ಮೆ ಸುರೇಶ್​ ಶೆಟ್ಟಿ, ಕಿರಣ್​ ಕುಮಾರ್​ ಕೊಡ್ಗಿ, ಮಾಜಿ ಶಾಸಕ ಲಾಲಾಜಿ ಆರ್​. ಮೆಂಡನ್​, ವಿಭಾಗ ಪ್ರಭಾರಿ ಉದಯ್​ ಕುಮಾರ್​ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ್​ ಶೆಟ್ಟಿ, ದ.ಕ ಜಿಲ್ಲಾಧ್ಯಕ್ಷ ಸತೀಶ್​ ಕುಂಪಲ, ವಿಕಾಸ ಪುತ್ತೂರು, ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಪ್ರಕಾಶ್​ ಶೆಟ್ಟಿ ಪಾದೆಬೆಟ್ಟು ಸ್ವಾಗತಿಸಿ, ಪ್ರ.ಕಾ. ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಮೋದಿ ಆಡಳಿತಕ್ಕೆ 11 ವರ್ಷ" ಕುರಿತ 'ಪ್ರದರ್ಶಿನಿ'ಯನ್ನು ಶಾಸಕ ವಿ.ಸುನೀಲ್​ ಕುಮಾರ್​ ಉದ್ಘಾಟಿಸಿದರು.