Version 1.0.0 
ಜಿಲ್ಲೆ

ಏಕವಿನ್ಯಾಸ ನಕ್ಷೆ ಸಮಸ್ಯೆ ಬಗೆಹರಿಯದಿದ್ದರೆ ಪ್ರಾಧಿಕಾರಕ್ಕೆ ಬೀಗ

ಗೋಪಾಲಕೃಷ್ಣ ಪಾದೂರ್

ಉಡುಪಿ: ಜಿಲ್ಲೆಯಲ್ಲಿ ಕಾಡುತ್ತಿರುವ ಏಕ ವಿನ್ಯಾಸ ನಕ್ಷೆ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ತಿಂಗಳೊಳಗೆ ಈ ಸಮಸ್ಯೆ ಪರಿಹರಿಸದಿದ್ದರೆ ಜಿಲ್ಲಾದ್ಯಂತ ಪ್ರಾಧಿಕಾರಗಳ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ವಿಜಯ ಕೊಡವೂರು ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

9/11 ಅರ್ಜಿ ನಮೂನೆ ಸಿಗದೆ ಬಡವರಿಗೆ ಮನೆಕಟ್ಟಲು ಕಷ್ಟವಾಗುತ್ತಿದೆ. ಬ್ಯಾಂಕ್​ ಗಳಲ್ಲಿ ಸಾಲ ಸೌಲಭ್ಯಗಳು ಸಿಗುತ್ತಿಲ್ಲ. ಇದರಿಂದ ಕಟ್ಟಡ ಕಾರ್ಮಿಕರೂ ನಿರುದ್ಯೋಗಿಗಳಾಗುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಪ್ರತಿಭಟನೆ ಮೂಲಕ ಎಚ್ಚರಿಸಿದರೂ ಸರ್ಕಾರ ಕ್ಯಾರೇ ಎನ್ನುತ್ತಿಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಶಾಸಕರ ಸಭೆ ನಡೆದರೂ ಲಪ್ರದವಾಗಿಲ್ಲ. ಸಮಸ್ಯೆಗೆ ಸ್ಪಂದಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್​ ಕಾಣೆಯಾಗಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸದಿದ್ದರೆ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಗುವುದು. ಜನಾಂದೋಲನಕ್ಕೆ ಕರೆ ನೀಡಲಾಗುವುದು ಎಂದು ಹೇಳಿದರು.

ಮೋರ್ಚಾ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ, ಮುಖಂಡರಾದ ಅದರ್ಶ ನಾಯರಿ, ಸುಶಾಂತ್​ ಬ್ರಹ್ಮಾವರ, ಸುರೇಂದ್ರ ಕುಲಾಲ್​ ಉಪಸ್ಥಿತರಿದ್ದರು.