ಚಿಕ್ಕಬಳ್ಳಾಪುರ: ದೇಶದ ಸಂಸತಿ, ಧರ್ಮದ ಬಗ್ಗೆ ಮಾತನಾಡುವ ಬಿಜೆಪಿಗರಿಗೆ ಮಾನ ಮರ್ಯಾದೆ ಇಲ್ಲ. ಹೆಣ್ಣಿನ ಬಗ್ಗೆ ಕೀಳಾಗಿ ಮಾತನಾಡುತ್ತಾರೆ ಎಂದು ಶಾಸಕ ಪ್ರದಿಪ್ ಈಶ್ವರ್ ಅಯ್ಯರ್ ಕಿಡಿಕಾರಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಂಪುರ ಗ್ರಾ.ಪಂ.ವ್ಯಾಪ್ತಿಯಲ್ಲಿ ಶುಕ್ರವಾರ ಕೈಗೊಂಡಿದ್ದ ನಮ್ಮೂರಿಗೆ ನಮ್ಮ ಶಾಸಕರು ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವಾಚ್ಯ ಶಬ್ದ ಬಳಸಿ ಟೀಕಿಸಿರುವುದು ಸರಿಯಲ್ಲ. ಅವರ ತಪ್ಪಿಗೆ ತಕ್ಕ ಶಿೆಯಾಗಬೇಕು. ಮೊದಲಿನಿಂದಲೂ ಬಿಜೆಪಿ ದೇಶದ ಸಂಸತಿ, ಧರ್ಮದ ಬಗ್ಗೆ ಮಾತನಾಡಿಕೊಂಡು ಬರುತ್ತಿದ್ದು ಮಹಿಳೆಯರನ್ನು ಅವಮಾನಿಸುವ ಹೇಳಿಕೆ ನೀಡುವವರಿಗೆ ಮಾನ ಮಾರ್ಯದೆ ಇರುವುದಿಲ್ಲ ಎಂದರು.
ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ದೇಶದ ಜನರಿಗೆ ದೇವರು. ಅವರ ಮಾರ್ಗದರ್ಶನದಲ್ಲಿ ಸಾಗಲಾಗುತ್ತದೆ. ಮಹನೀಯರ ಸ್ಮರಣೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಫ್ಯಾಷನ್ ಆಗಿದೆ ಎಂಬ ಹೇಳಿಕೆ ನೀಡಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಪಿ.ಎನ್.ಪ್ರಕಾಶ್ ಮತ್ತಿತರರು ಇದ್ದರು.
*ಕಾರ್ಯಕ್ರಮಕ್ಕೆ ಸಿಎಂ ಮೆಚ್ಚುಗೆ*
ನಮ್ಮ ಊರಿಗೆ ನಮ್ಮ ಶಾಸಕರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನರ ಪ್ರಸ್ತಾವನೆಯ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಮಂಜೂರಾತಿ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದರು.
ಸ್ಥಳಿಯ ಕಾರ್ಯಕ್ರಮದ ಬಗ್ಗೆ ಸಿಎಂಗೆ ಮಾಹಿತಿ ಇದೆ. ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಲು ಸೂಚಿಸಿದ್ದಾರೆ. ಇನ್ನು ಕ್ಷೇತ್ರದಲ್ಲಿ 2 ವಾಲ್ಮೀಕಿ ಭವನ ನಿರ್ಮಾಣಕ್ಕೆ ಅನುದಾನದ ಮಂಜೂರಾತಿ ಸಿಕ್ಕಿದೆ ಎಂದರು.