ಗದಗ: ರಾಜ್ಯ ಕಾಂಗ್ರೇಸ್ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ಗೆ 3 ರೂ, ಹಾಗೂ ಡಿಸೈಲ್ ಪ್ರತಿ ಲಿಟರ್ಗೆ 3.50 ರೂ, ಏರಿಸಿ ಜನರ ಮೇಲೆ ದೊಡ್ಡ ಹೊರೆಯನ್ನು ಹೊರೆಸಿದೆ. ಇದೊಂದು ಜನವಿರೋಧಿ ಸರ್ಕಾರ ಎಂದು ಬಿಜೆಪಿ ಜಿಲ್ಲಾ ವಕ್ತಾರ ಎಂ. ಎಂ. ಹಿರೇಮಠ ಹೇಳಿದ್ದಾರೆ
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರ ತಣವೇ ಜಾರಿಗೆ ಬರುವ ಹಾಗೆ ಪೆಟ್ರೋಲ್, ಡಿಸೈಲ್ ಧರವನ್ನು ಎರಿಸಿ ಜನರಿಗೆ ಗಾಯದ ಮೇಲೆ ಬರೆಯನ್ನು ಎಳೆದಿದ್ದಾರೆ. ಲೋಕಸಭಾ ಚುನಾವಣಾ ಮುಗಿದ ಕೂಡಲೇ ರಾಜ್ಯ ಸರ್ಕಾರ ತನ್ನ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಪೆಟ್ರೋಲ್ ಹಾಗು ಡಿಸೈಲ್ ಬೆಲೆ ಎರಿಕೆಯಿಂದ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆ ಆಗುವದು. ಇದರಿಂದ ಜನಸಾಮಾನ್ಯರ ಜೀವನ ಅಸ್ತವ್ಯಸ್ತವಾಗುವದು. ಈಗಾಗಲೇ ರಾಜ್ಯ ಸರ್ಕಾರ ಆಸ್ತಿ ತೆರಿಗೆ, ಸ್ಟಾಂಪ್ ಡ್ಯೂಟಿ ಹೆಚ್ಚಿಗೆ ಮಾಡಿ ಜನರಿಗೆ ಹೊರೆಯಾಗಿಸಿದೆ. ಬಿಟ್ಟಿ ಭಾಗ್ಯಗಳಿಂದ ಈಗಾಗಲೇ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಈ ರೀತಿ ಬೆಲೆ ಏರಿಸಿ ಜನರ ನಂಬಿಕೆಗೆ ದ್ರೋಹ ಬಗೆಯುತ್ತಿದೆ ಎಂದು ಆರೋಪಿಸಿದ್ದಾರೆ. ಏರಿಸಿದ ಪೆಟ್ರೋಲ್, ಡಿಸೈಲ್ ಬೆಲೆಯನ್ನು ಕೂಡಲೇ ಹಿಂಪಡೆಯಬೇಕೆಂದು ಎಂ.ಎಂ.ಹಿರೇಮಠ ಸರ್ಕಾರವನ್ನು ಒತ್ತಾಯಿಸಿದ್ದಾರೆ.