ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರವಾಗಿ ಏಪ್ರಿಲ್ ೨೩ರಂದು ಪುತ್ತೂರಿನಲ್ಲಿ ರೋಡ್ ಶೋ ನಡೆಯಲಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಬಿಜೆಪಿ ಚುನಾವಣಾ ಸಂಯೋಜಕರಾದ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.
ಬೆಳಗ್ಗೆ ೮.೩೦ಕ್ಕೆ ಅಣ್ಣಾ ಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ೧೦.೩೦ಕ್ಕೆ ಪುತ್ತೂರಿಗೆ ಬರಲಿದ್ದುö, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಾದ ಬಳಿಕ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದರು.ಅದೇ ದಿನ ಅಪರಾಹ್ನ ೩ ಗಂಟೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ಬಿಜೆಪಿ ರೋಡ್‌ಶೋ ನಡೆಯಲಿದೆ. ಸಂಜೆ ೫.೩೦ಕ್ಕೆ ವಿಟ್ಲದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ಬದಲ್ಲಿ ರೋಡ್ ಶೋ ನಡೆಯಲಿದೆ ಎಂದರು.ಇAದು ಮಹಾ ಅಭಿಯಾನ:ಏಪ್ರಿಲ್ ೨೧ರಂದು ಭಾನುವಾರ ಬೆಳಗ್ಗಿನಿಂದ ಸಂಜೆಯವರೆಗೂ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ೨೨೧ ಬೂತ್‌ಗಳಲ್ಲಿ ಕಾರ್ಯಕರ್ತರಿಂದ ಮನೆ ಮನೆ ಭೇಟಿ ಮತಯಾಚನೆಯ ಮಹಾ ಅಭಿಯಾನ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ನೇತೃತ್ವದಲ್ಲಿ ಈಗಾಗಲೇ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಹಕಾರ ಭಾರತಿಯಡಿಯಲ್ಲಿ ಗೆದ್ದ ಸಹಕಾರಿ ಸಂಘಗಳ ನಿರ್ದೇಶಕರ ಸಭೆ ನಡೆಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವಾö, ನಗರ ಮಂಡಲ ಅಧ್ಯಕ್ಷರಾದ ಪಿ.ಜಿ. ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಮಂಗಳೂರು ವಿಭಾಗದ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.