ರಾಜ್ಯ ಕಾಂಗ್ರೆಸ್​ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ರಾಜು ಕುರುಡಗಿ, ಉಷಾ ದಾಸರ, ಈಶ್ವರಪ್ಪ ನಾಯ್ಕರ, ಅನೀಲ ಅಬ್ಬಿಗೇರಿ, ಪ್ರಶಾಂತ ನಾಯ್ಕರ ಇತರರು ಇದ್ದರು. 
ಜಿಲ್ಲೆ

ರಾಜ್ಯ ಕಾಂಗ್ರೆಸ್​ ಸರ್ಕಾರದ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ: ಜಿಲ್ಲಾಧ್ಯಕ್ಷ ರಾಜು ಕುರಡಗಿ

Gadag - Shivanand Hiremath

ವಿಜಯವಾಣಿ ಸುದ್ದಿಜಾಲ ಗದಗ
ರಾಜ್ಯದಲ್ಲಿನ ಕಾಂಗ್ರೆಸ್​ ಸರ್ಕಾರವು ದಲಿತ ಸಮುದಾಯದ ವಿಚಾರದಲ್ಲಿ ಅನ್ಯಾಯ ಎಸಗುತ್ತಿದೆ. ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಆರೋಪಿಸಿದರು.
ದಲಿತ ಸಮುದಾಯ ಏಳ್ಗೆಗೆ ಮೀಸಲಿಟ್ಟಿದ್ದ 11144 ಕೋಟಿ ರೂಗಳನ್ನು ರಾಜ್ಯ ಕಾಂಗ್ರೆಸ್​ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ ಎಂದು ಆರೋಪಿಸಿ ಜಿಲ್ಲಾಡಳಿತ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿಕೊಂಡಿದೆ. ಕಾಂಗ್ರೆಸ್​ ಸರ್ಕಾರದ ಡೋಂಗಿ ದಲಿತ ಕಾಳಜಿಯು ಈ ಪ್ರಕರಣದಿಂದ ಬಯಲಿಗೆ ಬಂದಿದೆ. ದಲಿತರ ಹಿತದ ರಣೆ ಮಾಡಬೇಕಿದ್ದ ಸಮಾಜಕಲ್ಯಾಣ ಇಲಾಖೆ ಸಚಿವ ಹೆಚ್​. ಸಿ. ಮಹದೇವಪ್ಪನವರು ಈ ಅನ್ಯಾಯದ ವಿರುದ್ಧ ಮಾತನಾಡುತ್ತಿಲ್ಲ. ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಹಣವನ್ನು ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿಯೂ ಅಡ್ಡ ಬರುವುದಿಲ್ಲ. ದಲಿತರ ಹಿತಾಸಕ್ತಿಗಿಂತ ಓಟು ಬ್ಯಾಂಕ್​ ರಾಜಕಾರಣಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
ಮೊರಾಜಿರ್ ಶಾಲೆಯ ಅಭಿವೃದ್ಧಿ ಮತ್ತು ಹೊಸ ಶಾಲೆಗಳ ಆರಂಭಕ್ಕೆ ಮೀಸಲಾದ ಹಣವು ಇತರ ಯೋಜನೆಗಳಿಗೆ ಬಳಕೆಯಾಗಿದೆ. ದಲಿತ ಮತ್ತು ಹಿಂದುಳಿದ ವಿದ್ಯಾಥಿರ್ಗಳ ಭವಿಷ್ಯದೊಂದಿಗೆ ಇಂದಿನ ಸರ್ಕಾರ ಚಲ್ಲಾಟವಾಡುತ್ತಿದೆ. ಇದಲ್ಲದೆ ದಲಿತ ವಿದ್ಯಾಥಿರ್ಗಳ ಉನ್ನತ ಶಿಣಕ್ಕೆ ಮೀಸಲಿಟ್ಟ ಹಣವು ರ್ದುಬಳಕೆಯಾಗಿದೆ. ಉನ್ನತ ಶಿಣದಿಂದ ದಲಿತ ವಿದ್ಯಾಥಿರ್ಗಳನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕಳೆದ ಎಂಟು ತಿಂಗಳಿನಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದವರ ಗೃಹ ನಿರ್ಮಾಣ ಯೋಜನೆಯು ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್​ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ನಿಮಿರ್ಸಿ ಹಂಚುತ್ತಿದ್ದರೆ, ರಾಜ್ಯ ಸರ್ಕಾರದೀ ಯೋಜನೆಯು ಕೋಮಾ ಸ್ಥಿತಿಗೆ ತಲುಪಿದೆ ಎಂದು ಆರೋಪಿಸಿದರು.
ಬಿಜೆಪಿ ಎಸ್​.ಸಿ.ಮೋರ್ಚಾ ಜಿಲ್ಲಾಧ್ಯ ಮಂಜುನಾಥ ಮುಳಗುಂದ ಮಾತನಾಡಿ ಗ್ಯಾರಂಟಿಗೆ ಹಣ ನೀಡಬೇಕಾದ ಕಾರಣ ಮುಂಗಡ ಪತ್ರದಲ್ಲಿ 11 ಸಾವಿರ ಕೋಟಿ ಕಡಿತವಾಗಿದೆ. ಸಂವಿಧಾನ ಜಾಥಾ ಮಾಡುತ್ತಿರುವ ರಾಜ್ಯ ಸರ್ಕಾರ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ದಲಿತರಿಗೆ ಸೇರಬೇಕಾದ ಅನುದಾನವನ್ನು ನಿರಾಕರಿಸಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ನಗರಸಭೆ ಅಧ್ಯೆ ಉಷಾ ದಾಸರ, ಈಶ್ವರಪ್ಪ ನಾಯ್ಕರ, ಅನೀಲ ಅಬ್ಬಿಗೇರಿ, ಪ್ರಶಾಂತ ನಾಯ್ಕರ, ಲಕ್ಷ$್ಮಣ ದೊಡ್ಡಮನಿ, ಶಿವು ಹಿರೇಮನಿಪಾಟೀಲ, ನಾಗರಾಜ ತಳವಾರ, ಗೋವಿಂದರಾಜ ಪೂಜಾರ, ದೇವಪ್ಪ ಇಟಗಿ, ಶಶಿಧರ ದಿಂಡೂರ ಹಲವರು ಇದ್ದರು.