ಧಾರವಾಡ: ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಮಾಜಿ ಮೇಯರ್ ಈರೇಶ ಅಂಚಟಗೇರಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ತಹಸೀಲ್ದಾರ್ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಂಗಾರು ಮಳೆಯಾಗದೆ ರೈತರ ಸಂಕಷ್ಟದಲ್ಲಿದ್ದಾರೆ. ಕೂಡಲೇ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಗ್ರೇಡ್- 2 ತಹಸೀಲ್ದಾರ್ ಹನುಮಂತ ಕೊಚ್ಚರಗಿ ಅವರ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.
ವಿಜಯಾನಂದ ಶೆಟ್ಟಿ, ಸುನೀಲ ಮೋರೆ, ಬಸವರಾಜ ಗರಗ, ಶ್ರೀನಿವಾಸ ಕೋಟ್ಯಾನ, ಹರೀಶ ಬಿಜಾಪುರ, ಅಮಿತ ಪಾಟೀಲ, ಮಂಜು ನೀರಲಕಟ್ಟಿ, ಭೂಪಾಲ ದೇವಕ್ಕಿ, ಬಸವರಾಜ ಬಾಳಗಿ, ವೀರೇಶ ಹಿರೇಮಠ ಹಾಗೂ ರೈತ ಮೋರ್ಚಾ ಪದಾಽಕಾರಿಗಳು ಉಪಸ್ಥಿತರಿದ್ದರು.