ಜಿಲ್ಲೆ

ಸರ್ಕಾರದಿಂದ ಉದ್ದೇಶಪೂರ್ವಕ ಸಮಸ್ಯೆ ಸೃಷ್ಟಿ: ಪ್ರತಾಪ್​ ಸಿಂಹ ನಾಯಕ್​

ಗೋಪಾಲಕೃಷ್ಣ ಪಾದೂರ್

ಉಡುಪಿ: ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಿಗುತ್ತಿಲ್ಲ. ಏಕ ವಿನ್ಯಾಸ ನಕ್ಷೆ (9/11) ಅನುಮೋದನೆಗೆ ಸರ್ಕಾರ ವಿಳಂಬ ಧೋರಣ ಅನುಸರಿಸುತ್ತಿದೆ. ಇದರಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಬಿಜೆಪಿಯನ್ನು ಬೆಂಬಲಿಸುತ್ತಿರುವ ಕಾರಣಕ್ಕಾಗಿ ಉದ್ದೇಶಪೂರ್ವಕವಾಗಿ ಸರ್ಕಾರ ಈ ಸಮಸ್ಯೆಗಳನ್ನು ಸೃಷ್ಟಿಸಿದೆ. ಇದರ ಹಿಂದೆ ಷಡ್ಯಂತರ ಅಡಗಿದೆ ಎಂದು ವಿಧಾನಪರಿಷತ್​ ಸದಸ್ಯ ಪ್ರತಾಪ್​ ಸಿಂಹ ನಾಯಕ್​ ಆಕ್ರೋಶವ್ಯಕ್ತಪಡಿಸಿದರು.

ಜಿಲ್ಲೆಯಾದ್ಯಂತ ಏಕ ವಿನ್ಯಾಸ ನಕ್ಷೆ (9/11) ಅನುಮೋದನೆಗೆ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಹಾಗೂ ಒಬಿಸಿ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಈ ಹಿಂದೆ ಗ್ರಾಪಂನಲ್ಲೇ ಏಕ ವಿನ್ಯಾಸ ನೆ ನೀಡಲಾಗುತ್ತಿತ್ತು. ಆದರೆ ರಾಜ್ಯ ಸರ್ಕಾರ ಏಕಪಯವಾಗಿ ನಿಯಮಗಳಲ್ಲಿ ಬದಲಾವಣೆ ಮಾಡಿದ್ದರಿಂದ ಜನರು ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಅಲೆದಾಡುವಂತಾಗಿದೆ. ಸರ್ಕಾರದ ಜನವಿರೋಧಿ ನೀತಿಯಿಂದಾಗಿ ಎರಡೂ ಜಿಲ್ಲೆಯ ಅರ್ಥಿಕ ಚಟುವಟಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕಟ್ಟಡ ನಿರ್ಮಾಣ ಸಾಮಾಗ್ರಿ ಮಾರಾಟ ಪ್ರಮಾಣ ಕುಸಿದಿದೆ. ಕಟ್ಟಡ ಕಾರ್ಮಿಕರಿಗೆ ಉದ್ಯೋಗವಿಲ್ಲ. ಪಂಚ ಗ್ಯಾರೆಂಟಿ ಯೋಜನೆ ಹಾಗೂ 2 ಸಾವಿರ ಗೃಹಲಕ್ಷಿ$್ಮ ಬಗ್ಗೆ ಮಾತನಾಡುವ ಕಾಂಗ್ರೆಸಿಗರಿಗೆ ದುಡಿಯುವ ವರ್ಗಕ್ಕೆ ಆಗುತ್ತಿರುವ ಅನ್ಯಾಯ ಕಾಣಿಸುತ್ತಿಲ್ಲ ಎಂದರು.

ರಾಜ್ಯದಲ್ಲಿ ಬಹುಬೇಗ ಜನಮನ್ನಣೆ ಕಳೆದುಕೊಂಡಿರುವ ಸರ್ಕಾರ ಜನರ ಸಮಸ್ಯೆಗಳಿಗೆ ಧ್ವನಿ ಎತ್ತಿದ ಶಾಸಕರು ಹಾಗೂ ಬಿಜೆಪಿ ಮುಖಂಡರ ವಿರುದ್ಧ ಎ್​ ಐ ಆರ್​ಗಳನ್ನು ಹಾಕುತ್ತಿದೆ. ಸರ್ಕಾರದ ಸರ್ವಾಧಿಕಾರಿ ಧೋರಣೆಗಳಿಗೆ ಮುಂದಿನ ಚುನಾವಣೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಶಾಸಕ ಕಿರಣ್​ ಕುಮಾರ್​ ಕೊಡ್ಗಿ, ವಿಪ ಸದಸ್ಯ ಕಿಶೋರ್​ ಕುಮಾರ್​ ಪುತ್ತೂರು, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್​ ಶೆಟ್ಟಿ, ಮುಖಂಡರಾದ ರತ್ನಾಕರ ಹೆಗ್ಡೆ ಮಟ್ಟಾರು. ಉದಯಕುಮಾರ್​ ಶೆಟ್ಟಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯ ವಿಜಯ ಕೊಡವೂರು, ರೇಶ್ಮಾ ಉದಯ್​ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಕೂಡ ರಾಜ್ಯದ ಕಾಂಗ್ರೆಸ್​ ಸರ್ಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 9/11, ಕೆಂಪುಕಲ್ಲು, ಮರಳು ಹಾಗೂ ಇನ್ನಿತರ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದೆ. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್​ ನಾಯಕರು ದ್ವೇಷದ ರಾಜಕಾರಣ ಬಿಟ್ಟು ಜನರ ಕೆಲಸಕ್ಕೆ ಕೈಜೋಡಿಸುವ ಕಾರ್ಯ ಮಾಡಬೇಕು. ಕೂಡಲೇ ಏಕವಿನ್ಯಾಸ ನಕ್ಷೆಯ ಸಮಸ್ಯೆಯನ್ನು ಬಗೆಹರಿಸಬೇಕು. ಈ ಹಿಂದೆ 25 ಸೆಂಟ್ಸ್​ ವರೆಗಿನ ಜಾಗಕ್ಕೆ ಏಕ ವಿನ್ಯಾಸ ನಕ್ಷೆ ನೀಡಲು ಅವಕಾಶವಿತ್ತು. ಅದನ್ನು ಮುಂದುವರಿಸಬೇಕು. ಯಶ್ಪಾಲ್​ ಸುವರ್ಣ, ಶಾಸಕರು, ಉಡುಪಿ