ವಿಜಯವಾಣಿ ಸುದ್ದಿಜಾಲ ಗದಗ
ರಾಜ್ಯಪಾಲರ ವಿರುದ್ಧ ಅವಹೇಳಕಾರಿ ಪದ ಬಳಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಟಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆಲಹೊತ್ತು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿತು.
ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ, ಅವರ ವಿರುದ್ಧ ಅವಹೇಳಕಾರಿ ಪದ ಬಳಸಿದೆ. ಕಾಂಗ್ರೆಸ್ ನಾಯಕ ಐವಾನ್ ಡಿಸೋಜ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ "ಕೂಡಲೇ ಗವರ್ನರ್ ಮರಳಿ ಹೋಗಬೇಕು. ಹೋಗದಿದ್ದರೆ ಬಾಂಗ್ಲಾ ದೇಶದ ಮಾದರಿಯಲ್ಲಿ ಗವರ್ನರ್ ಆಫೀಸ್ಗೆ, ಗವರ್ನರ್ ಮನೆಗೆ ನುಗ್ಗುವ ಕೆಲಸ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ರಾಜಭವನಕ್ಕೆ ನುಗ್ಗುವುದು ಖಂಡಿತ. ರಾಜಭವನದಲ್ಲಿ ಏನಾದರೂ ಅಹಿತಕರ ಟನೆ ನಡೆದರೆ ಅದಕ್ಕೆ ರಾಜ್ಯಪಾಲರು ಹಾಗು ಕೇಂದ್ರ ಸರ್ಕಾರ ನೇರ ಹೊಣೆ ಎಂದು ಹೇಳಿದ್ದಾರೆ. ಈ ರೀತಿಯ ಹೇಳಿಕೆಯಿಂದ ರಾಜ್ಯದಲ್ಲಿ ಅಭದ್ರತೆ ಸೃಷ್ಟಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದರು.
ರಾಷ್ಟ್ರ ವಿರೋಧಿ ಹಾಗು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ದುರುದ್ದೇಶದಿಂದ ತಮ್ಮ ಕಾರ್ಯಕರ್ತರಿಗೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವ ಕುಮ್ಮಕ್ಕು ನೀಡುವ ರೀತಿ ಪ್ರಚೋದನಾತ್ಮಕ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರು ನೀಡುತ್ತಿದ್ದಾರೆ. ಸಚಿವ ಜಮೀರ ಅಹ್ಮದ ಕೂಡ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದು ಕಾನೂನು ಬಾಹಿರ ಆಗಿದೆ. ಕೂಡಲೇ ಹಿಂಪಡೆಯದಿದ್ದರೆ ರಾಜ್ಯದಲ್ಲಿ ಜನ ಧಂಗೆ ಏಳುತ್ತಾರೆ. ಮುಂದಾಗುವ ಅನಾಹುತಗಳಿಗೆ ರಾಜ್ಯಪಾಲರೇ ನೇರ ಹೊಣೆ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಇಂತಹ ಹೇಳೀಕೆಯಿಂದ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಅರಾಜುಕತೆ ಸೃಷ್ಟಿ ಮಡುತ್ತಿದ್ದಾರೆ ಎಂದು ಆರೋಪಿಸಿದರು.
ಸಾಂವಿದಾನಿಕ ಸಂಸ್ಥೆ ಹಾಗು ವ್ಯಕ್ತಿಗಳ ವಿರುದ್ಧ ಅಪಪ್ರಚಾರ ಮತ್ತು ಕಾನೂನು ಸುವ್ಯವಸ್ಥೆ ವಿಲಗೊಳಿಸುವ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಂರ್ಪೂಣ ವಿಲವಾಗಿದೆ. ವಿಧಾನ ಪರಿಷನ್ ಸದಸ್ಯ ಐವಾನ್ ಡಿಸೋಜಾ, ಸಚಿವ ಸಚಿವ ಜಮೀರಅಹ್ಮದ ವಿರುದ್ದ ಸೂಕ್ತ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದಶಿರ್ ಲಿಂಗರಾಜ ಪಾಟೀಲ, ಎಂ. ಎಸ್. ಕರೀಗೌಡ್ರ, ವಿಜಯಕುಮಾರ ಗಡ್ಡಿ, ಶ್ರೀಪತಿ ಉಡುಪಿ, ಸಿದ್ದು ಪಲ್ಲೇದ, ಎಂ. ಎಂ. ಹಿರೇಮಠ, ರಾವೇಂದ್ರ ಯಳವತ್ತಿ ಹಲವರು ಇದ್ದರು.