ಜಿಲ್ಲೆ

ಸುಳ್ಯ ತಾಲೂಕಲ್ಲಿ ಬಿಜೆಪಿ ಪ್ರತಿಭಟನೆ : ನಗರ ಪಂಚಾಯಿತಿ, ವಿವಿಧ ಗ್ರಾಮ ಪಂಚಾಯಿತಿ ಮುಂಭಾಗ ಸಭೆ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಸುಳ್ಯ

ರಾಜ್ಯದ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಂಡಲ ಸಮಿತಿ ವತಿಯಿಂದ ಸುಳ್ಯ ನಗರ ಪಂಚಾಯಿತಿ ಹಾಗೂ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ವಿವಿಧೆಡೆ ನಡೆದ ಪ್ರತಿಭಟನೆಯಲ್ಲಿ ಪ್ರಮುಖ ಬಿಜೆಪಿ ನೇತಾರರು ಭಾಗವಹಿಸಿದ್ದರು. ಸುಳ್ಯ ನಗರ ಪಂಚಾಯಿತಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ನಗರ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ನಪಂ ಉಪಾಧ್ಯಕ್ಷ ಬುದ್ಧ ನಾಯ್ಕ, ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ಅಧ್ಯಕ್ಷ ಕುಸುಮಾಧರ ಎ.ಟಿ., ಬಿಜೆಪಿ ನಗರ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ನಾರಾಯಣ ಶಾಂತಿನಗರ, ಬೂಡು ರಾಧಾಕೃಷ್ಣ ರೈ ಮತ್ತಿತರರಿದ್ದರು.

ಅಜ್ಜಾವರ ಪಂಚಾಯಿತಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮಂಡಲ ಸಮಿತಿ ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ತಾಪಂ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ ವಿಕ್ರಂ ಎ.ವಿ.ಅಡ್ಪಂಗಾಯ, ಪ್ರಮುಖರಾದ ರಾಜೇಶ್ ಶೆಟ್ಟಿ ಮೇನಾಲ, ಜಿ.ಜಿ.ನಾಯಕ್, ಮನ್ಮಥ ಎ.ಎಸ್., ಸತ್ಯವತಿ ಬಸವನಪಾದೆ, ಜಯಂತಿ ಜನಾರ್ದನ ಮತ್ತಿತರರು ಭಾಗವಹಿಸಿದ್ದರು.