ಜಿಲ್ಲೆ

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಜಗದೀಶ ಹೊಂಬಳಿ

ಬೆಳಗಾವಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತ ವಿರೋ ನೀತಿ ಅನುಸರಿಸುತ್ತಿದೆ. ರೈತಪರ ಕಾಯ್ದೆಗಳನ್ನು ರದ್ದುಪಡಿಸಿ ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಶನಿವಾರ ಪ್ರತಿಭಟಿಸಿದರು.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 9 ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಭಯೋತ್ಪಾದನೆ, ಉಗ್ರರ ಚಟುವಟಿಕೆಗಳನ್ನು ದಮನ ಮಾಡಿದೆ. ಆದರೆ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತಂಕವಾದಿಗಳಿಗೆ ಪ್ರೋತ್ಸಾಹಿಸುತ್ತಿದೆ. ಹಿಂದು ವಿರೋ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಘೋಷಣೆ ಕೂಗಿದರು. ರಾಜ್ಯದಲ್ಲಿ ಆತಂಕವಾದಿಗಳ ಚಟುವಟಿಕೆಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ಎನ್‌ಐಎಗೆ ಅವಕಾಶ ನೀಡುತ್ತಿಲ್ಲ. ಹೀಗಾಗಿ ಈ ಸರ್ಕಾರ ದೇಶದ್ರೋಹ ಕೆಲಸ ಮಾಡುತ್ತಿದೆ. ಹಿಂದು ವಿರೋ ಕೆಲಸ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ದುಡಿಯುವ ಜನರಿಗೆ ಉದ್ಯೋಗ ಕಲ್ಪಿಸುವ ಬದಲು ಗ್ಯಾರಂಟಿಗಳ ಹೆಸರಿನಲ್ಲಿ ಹಣ ನೀಡಿ ಜನರನ್ನು ದಾರಿ ತಪ್ಪಿಸುತ್ತಿದೆ. ಗ್ಯಾರಂಟಿಗಳಿಂದ ಜನರನ್ನು ಮರಳು ಮಾಡಿ, ಶ್ರಮಿಕ ವರ್ಗಕ್ಕೆ ಬರೆ ಎಳೆದಿದೆ ಎಂದರು.
ರಾಜ್ಯ ಬಿಜೆಪಿ ವಕ್ತಾರ ಎಂ.ಬಿ. ಝಿರಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಜನ ವಿರೋ, ರೈತರು ಮತ್ತು ಹಿಂದು ವಿರೋ ನೀತಿ ಖಂಡಿಸಿ ಇಡೀ ರಾಜ್ಯಾದ್ಯಂತ ಪ್ರತಿಭಟಿಸುತ್ತಿದ್ದೇವೆ. ಕೊಟ್ಟಿರುವ ಗ್ಯಾರಂಟಿಗಳನ್ನು ಅನುಷ್ಠಾನ ಮಾಡದ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಈಗಾಗಲೇ ಬೆಳಗಾವಿ ಜಿಲ್ಲೆಯನ್ನು ಬರಗಾಲ ಪೀಡಿತವಾಗಿ ಘೋಷಿಸಬೇಕಾಗಿತ್ತು. ನಾವು ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಭಯೋತ್ಪಾದನೆ ತಾಂಡವವಾಡುತ್ತಿದೆ. ಅವೇಶನದಲ್ಲಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಭಯೋತ್ಪಾದಕರು ಬೆಂಗಳೂರಿಗೆ ಬಂದು ಕುಳಿತಿದ್ದರೂ ಸರ್ಕಾರ ನಿರ್ಲಕ್ಷಿಸಿದೆ. ವಿಪಕ್ಷಗಳ ಮಹಾಮೈತ್ರಿಯ ನಾಯಕರ ಸಭೆಯಲ್ಲಿ ಸರ್ಕಾರ ಐಎಎಸ್ ಅಕಾರಿಗಳನ್ನು ನೇಮಿಸುವ ಕೆಟ್ಟ ಕೆಸಲ ಮಾಡಿದೆ. ಬಿಜೆಪಿ ಆಡಳಿತದಲ್ಲಿ ಎಂದೂ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಲಿಲ್ಲ. ಆದರೆ, ಈ ಸರ್ಕಾರ ಅಕಾರಕ್ಕೆ ಬಂದ ಬಳಿಕ ಮೊದಲ ಘೋಷಣೆ ಕೇಳಿದ್ದೇವೆ. ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆದಿದ್ದೀರಿ. ಗೋಹತ್ಯೆ ಆಗಬೇಕು ಎಂಬ ಭಾವನೆ ಇಟ್ಟುಕೊಂಡು ನೀವು ಕೆಲಸ ಮಾಡುತ್ತಿದ್ದೀರಾ? ನೀವು ಹಿಂದು ಅಲ್ಲವಾ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
ಶಾಸಕ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಅನಿಲ ಬೆನಕೆ, ಮಹಾಂತೇಶ ದೊಡಗೌಡರ ಹಾಗೂ ಮಲ್ಲಿಕಾರ್ಜುನ ಮಾರಿಹಾಳ, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.