ಬೆಳಗಾವಿ: ಕಾಂಗ್ರೆಸ್ ಸರ್ಕಾರದ ಹಗರಣಗಳು ಹಾಗೂ ವಸತಿ ಇಲಾಖೆಯ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶುಕ್ರವಾರ ನಗರದಲ್ಲಿ ಪ್ರತಿಭಟಿಸಲಾಯಿತು.
ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಜಿಲ್ಲಾ ಪಂಚಾಯಿತಿ ವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರಾಜೀನಾಮೆ ಆಗ್ರಹಿಸಿದರು. ವಸತಿ ಸಚಿವ ಜಮೀರ್ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ಕೆಲ ಹೊತ್ತು ಮಾತಿನ ಜಟಾಪಟಿ ನಡೆಯಿತು. ಬಳಿಕ ಜಿಪಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.
ಜಿಲ್ಲಾ ಗ್ರಾಮೀಣ ಘಟಕದ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ, ಜ್ಯೋತಿ ಶೆಟ್ಟಿ, ಮುರುೇಂದ್ರಗೌಡ ಪಾಟೀಲ, ಡಾ.ಸೋನಾಲಿ ಸರ್ನೋಬತ್, ಗೀತಾ ಸುತಾರ, ಹನುಮಂತ ಕೊಂಗಾಲಿ, ಸಚಿನ್ ಕಡಿ, ನಾಗರಾಜ ಇತರರಿದ್ದರು.