ಶಿರಹಟ್ಟಿ: ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ ಪೂರೈಸದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಪಟ್ಟಣದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.
ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ತಮ್ಮ ತಪ್ಪು ಮರೆ ಮಾಚಲು ಕೇಂದ್ರ ಸರ್ಕಾರವನ್ನು ದೂಷಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಯೂರಿಯಾ ಪೂರೈಸದೆ ರೈತರಿಗೆ ಮೋಸ ಮಾಡುತ್ತಿದ್ದಾರೆ. ಎಲ್ಲ ವರ್ಗದ ಜನರ ಜೀವನದೊಂದಿಗೆ ಚೆಲ್ಲಾಟವಾಡಿದಂತೆ ರೈತರ ಜತೆಯೂ ಆಟವಾಡುತ್ತಿದೆ. ಉತ್ತಮ ಮಳೆಯಾಗಿ ಬಿತ್ತನೆ ಚಟುವಟಿಕೆ ಆರಂಭವಾಗುತ್ತಿದ್ದಂತೆಯೇ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಲಾಗಿದೆ. ಇದಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರೇ ಕಾರಣ ಎಂದು ಆರೋಪಿಸಿದರು.
ರೈತರಿಗೆ ನ್ಯಾಯಯುತವಾಗಿ ಸಿಗಬೇಕಿದ್ದ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಸರ್ಕಾರ ಗ್ಯಾರಂಟಿಗಳಿಂದ ಜನರಿಗೆ ಟೋಪಿ ಹಾಕುತ್ತಿದೆ ಎಂದು ಆರೋಪಿಸಿದರು.
ಶಿರಹಟ್ಟಿ ಮಂಡಲ ಅಧ್ಯಕ್ಷ ಸುನಿಲ ಮಾಂತಶೆಟ್ಟರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕೀರೇಶ ರಟ್ಟಹಳ್ಳಿ, ವೀರಣ್ಣ ಅಂಗಡಿ, ರಾಜು ಕುಲಕರ್ಣಿ, ಫಕೀರಪ್ಪ ಗೂಡಿ, ಶಿವಪ್ರಕಾಶ ಮಹಾಜನಶೆಟ್ಟರ, ಹೇಮಗಿರೀಶ ಹಾವಿನಾಳ, ನಾಗರಾಜ ಲಕ್ಕುಂಡಿ, ಬಿ.ಡಿ. ಪಲ್ಲೇದ, ತಿಪ್ಪಣ್ಣ ಕೊಂಚಿಗೇರಿ, ಸಿ.ಸಿ. ನೂರಶೆಟ್ಟರ, ಸಂದೀಪ ಕಪ್ಪತ್ತನವರ, ಶಂಕರ ಮರಾಠೆ, ತಿಮ್ಮರೆಡ್ಡಿ ಮರಡ್ಡಿ, ರಾಜೀವ್ ರೆಡ್ಡಿ ಬೊಮ್ಮನಕಟ್ಟಿ, ಪ್ರವೀಣ ಪಾಟೀಲ, ಪ್ರಶಾಂತ ಗುಡದಪ್ಪನವರ, ರಾಮಣ್ಣ ಕಂಬಳಿ, ಗಂಗಾಧರ ಮೆಣಸಿನಕಾಯಿ, ಅಕ್ಬರಸಾಬ ಯಾದಗಿರಿ ಇತರರಿದ್ದರು.