ಜಿಲ್ಲೆ

ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ

ಅವಿನಾಶ್ ಜೈನಹಳ್ಳಿ


ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಮಂಗಳವಾರ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದು, ಪ್ರತಿಭಟನೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ, ನಗರಾಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಘಟಕದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.