ಉಡುಪಿ: ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಗಳ ಯಜ್ಞೋಪವೀತ (ಜನಿವಾರ) ತೆಗೆಸಿದ ಘಟನೆ ಖಂಡಿಸಿ ಉಡುಪಿ ನಗರ ಬಿಜೆಪಿ ವತಿಯಿಂದ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಏ.24ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ.
ಧಾರ್ಮಿಕ ಮುಖಂಡರಾದ ದಾಮೋದರ ಶರ್ಮ, ಸಗ್ರಿ ಆನಂದ ತೀರ್ಥ, ಚೇಂಪಿ ರಾಮಚಂದ್ರ ಭಟ್ ಹಾಗೂ ಶಿವಾನಂದ ನಾಯ್ಕ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ.
ಸಿಇಟಿ ಪರೀಕ್ಷೆ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ಕತ್ತರಿಸುವ ಮೂಲಕ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಸರ್ಕಾರ ಹಿಂದು ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಇದಕ್ಕೆಲ್ಲ ಕಾರಣ ಹಿಂದು ವಿರೋಧಿ ಹಾಗೂ ಮತಾಂಧ ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದು ಸಮಾಜಿಗರು ಪಾಲ್ಗೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.