ಜಿಲ್ಲೆ

ಕಡಬದಲ್ಲಿ ಬಿಜೆಪಿ ರೋಡ್ ಶೋ

ಸೌಮ್ಯ ಆರ್

ಕಡಬ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರದ ದುರಾಡಳಿತಕ್ಕೆ ಕಡಬದ ಜನತೆ ತಕ್ಕ ಉತ್ತರ ನೀಡಲಿದ್ದಾರೆ. ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರುವ ಮೂಲಕ ರಾಜ್ಯ ಬಿಜೆಪಿಗೆ ಶಕ್ತಿ ತುಂಬಬೇಕು ಎಂದು ದ.ಕ. ಸಂಸದ ಬ್ರಿಜೇಶ್ ಚೌಟ ಹೇಳಿದರು.

ಕಡಬದ ಪಟ್ಟಣ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಕಡಬ ಪೇಟೆಯಲ್ಲಿ ಭಾರತೀಯ ಜನತಾ ಪಾರ್ಟಿಯ ರೋಡ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿದರು. ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಪಂ ಮಾಜಿ ಸದಸ್ಯರಾದ ಹರೀಶ್ ಕಂಜಿಪಿಲಿ, ಬಾಲಕೃಷ್ಣ ಸುವರ್ಣ ಬಾಣಜಾಲು ಮತ್ತಿತರರಿದ್ದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಪ್ರಸ್ತಾವನೆಗೈದರು. ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ವಿನಯ ಕಂದಡ್ಕ ವಂದಿಸಿದರು.