ಜಿಲ್ಲೆ

ಮೀಸಲಾತಿ ಹೆಚ್ಚಳ ಹಿನ್ನೆಲೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

reportermys

ಮಂಡ್ಯ: ಪರಿಶಿಷ್ಟ ಜಾತಿಗೆ ಶೇ.15ರಷ್ಟಿದ್ದ ಮೀಸಲಾತಿಯನ್ನು ಶೇ.17ಕ್ಕೆ ಹೆಚ್ಚಳ ಮಾಡಲು ಯೋಜನೆಗಳನ್ನು ರೂಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ಸಂಭ್ರಮಾಚರಣೆ ಮಾಡಲಾಯಿತು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಪದಾಧಿಕಾರಿಗಳು, ರಾಜ್ಯ ಸರ್ಕಾರದ ಪರ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು. ಸಿಹಿ ವಿತರಿಸಿ ಸಂಭ್ರಮಿಸಿದರು.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ನಿತ್ಯಾನಂದ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ದಲಿತ ಪರ ಯೋಜನೆಗಳನ್ನು ಜಾರಿ ಮಾಡುತ್ತಿವೆ. ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ನೀಡಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮಸ್ಥಳ, ವ್ಯಾಸಂಗ ಮಾಡಿದ ಜಾಗ ಹಾಗೂ ಸಮಾಧಿಯನ್ನು ಸ್ಮಾರಕಗಳನ್ನಾಗಿ ಮಾಡಿ ಪಂಚ ತೀರ್ಥ ಎಂದು ಹೆಸರಿಟ್ಟು 1,500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿದ್ದಾರೆ. ಪ್ರಸ್ತುತ ರಾಜ್ಯ ಸರ್ಕಾರ ಸಫಾಯಿ ಕರ್ಮಚಾರಿಗಳ ಕಾಯಂ ನೇಮಕಾತಿಗೆ 11,333 ಜನರನ್ನು ನೇರ ನೇಮಕಾತಿ ಮಾಡಿ ಆದೇಶ ಹೊರಡಿಸಿದೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಸಿದ್ದರಾಮಯ್ಯ, ಪ್ರಧಾನ ಕಾರ್ಯದರ್ಶಿ ಶಂಕರ್, ನಗರಸಭೆ ನಾಮನಿರ್ದೇಶಿತ ಸದಸ್ಯ ಶಿವಲಿಂಗ, ವೈರಮುಡಿ ಇತರರಿದ್ದರು.