ಹುಬ್ಬಳ್ಳಿ: ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕರ್ತರ ಸಮಾವೇಶವನ್ನು ಇದೇ ತಿಂಗಳು ಮಾಡಲು ತೀರ್ಮಾನಿಸಿದ್ದು, ಅಗತ್ಯ ಸಿದ್ಧತೆ ನಡೆದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಬಿಜೆಪಿ ಎಸ್‌ಸಿ ಮೋರ್ಚಾ ಮುಖಂಡರು ಮತ್ತು ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪರಿಶಿಷ್ಟ ಸಮುದಾಯ ಈ ಬಾರಿಯೂ ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮಾಜದಲ್ಲಿ ಸಮಾನತೆ ತರಲೆಂದು ಸಾಕಷ್ಟು ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನರು ಈ ಬಾರಿಯೂ ಮೋದಿ ಬೆಂಬಲಕ್ಕೆ ನಿಂತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಂತರ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಶಾಸಕ ಮಹೇಶ್ ಟೆಂಗಿನಕಾಯಿ, ಪ್ರಮುಖರಾದ ಬಸವರಾಜ ಅಮ್ಮಿನಬಾವಿ, ಮಹೇಂದ್ರ ಕೌತಾಳ ಇತರರು ಇದ್ದರು.