ಜಿಲ್ಲೆ

ಬಿಜೆಪಿ ವಿಶೇಷ ಸಭೆ

ಉತ್ತರ ಕನ್ನಡ ಡೆಸ್ಕ್

ಹಿರೇಕೆರೂರ: ತಾಲೂಕಿನ ಬಾಳಂಬೀಡ ಗ್ರಾಮದಲ್ಲಿರುವ ಮಾಜಿ ಸಚಿವ ಬಿ.ಸಿ. ಪಾಟೀಲ ಗೃಹ ಕಚೇರಿಯಲ್ಲಿ ಸೆ. 15ರಂದು ಮಧ್ಯಾಹ್ನ 2.30 ಕ್ಕೆ ಬಿಜೆಪಿಯ ಬೂತ್ ಅಧ್ಯಕ್ಷರು, ಬಿಎಲ್‌ಎ- 2, ಶಕ್ತಿ ಮತ್ತು ಮಹಾಶಕ್ತಿ ಕೇಂದ್ರಗಳ ಪ್ರಮುಖರ ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ವಿಶೇಷ ಸಭೆ ಏರ್ಪಡಿಸಲಾಗಿದೆ.

ಸಭೆಯಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ, ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಜಿಲ್ಲಾ ಪ್ರಭಾರಿ ಎಲ್.ಎನ್. ಕಲ್ಲಣ್ಣನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರೇಶ ಚನ್ನಣ್ಣನವರ, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಾಲಾಕ್ಷಗೌಡ ಪಾಟೀಲ, ಪಕ್ಷದ ವಿವಿಧ ಮುಖಂಡರು ಭಾಗವಹಿಸುವರು ಎಂದು ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವರಾಜ ನಾಗಣ್ಣನವರ, ಮಹೇಶ ಮುತ್ತಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.