ಜಿಲ್ಲೆ

ನ.5ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ: ಸಜ್ಜಾಗುತ್ತಿದೆ ಮಂಗಳೂರು

ಮಂಗಳೂರು: ಉಪಚುನಾವಣೆ ಗದ್ದಲ ಮುಗಿಯತ್ತಿದ್ದಂತೆ ಬಿಜೆಪಿ ನಾಯಕರು ರಾಜ್ಯ ಕಾರ್ಯಕಾರಿಣಿ ಸಭೆಗೆ ಸಿದ್ದರಾಗುತ್ತಿದ್ದಾರೆ. ಮಂಗಳೂರಿನಲ್ಲಿ ಈ ಬಾರಿ ರಾಜ್ಯ ಕಾರ್ಯಕಾರಿಣಿ ಸಭೆಯ ನಡೆಯಲಿದೆ. ಸಿಎಂ ಯಡಿಯೂರಪ್ಪ ಸಹಿತ ರಾಜ್ಯ ಬಿಜೆಪಿ ನಾಯಕರು ಮಂಗಳೂರಿಗೆ ಆಗಮಿಸಲಿದ್ದಾರೆ. ನಗರದ ಹೋಟೆಲ್ ಓಶಿಯನ್ ಪರ್ಲ್​ ನಲ್ಲಿ ನ.5 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಿಗದಿಯಾಗಿದೆ.

ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ಆಯೋಜಿತವಾಗುತ್ತಿದೆ. ಈಗಾಗಲೇ ಪಕ್ಷದ ಸ್ಥಳೀಯ ಕಾರ್ಯಕರ್ತರು ಇದಕ್ಕೆ ಸಿದ್ಧತೆ ನಡೆಸಿದ್ದು, ಪೂರ್ವತಯಾರಿ ನಡೆಯುತ್ತಿದೆ. 

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಬಿಜೆಪಿ  ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೋರ್ ಕಮಿಟಿ ಸದಸ್ಯರು ಸಹಿತ ಹಿರಿಯ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.