ಜಿಲ್ಲೆ

ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಜನರ ಗಮನಸೆಳೆದಿದೆ. ಯಡಿಯೂರಪ್ಪ ನಂತರ ಬಸವರಾಜ ಬೊಮ್ಮಾಯಿ‌ ಕಾರ್ಯಕ್ರಮಗಳು ಜನರಲ್ಲಿ ವಿಶ್ವಾಸ ಹೆಚ್ಚಿಸಿದೆ. ಡಬಕ್ ಇಂಜಿನ್ ಸರ್ಕಾರದ ಬಗ್ಗೆ ಒಲವು ಹೆಚ್ಚಳದಿಂದ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದರು.

ಕಾಂಗ್ರೆಸ್ ದುರ್ಬೀನು ಹಾಕಿಕೊಂಡು ಹುಡುಕುವ ಪರಿಸ್ಥಿತಿ ಉಂಟಾಗಿದೆ. ಆದರೂ ರಾಜ್ಯ ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬರುತ್ತೇವೆ ಎಂದು ಪ್ಯಾಂಟ್, ಶರ್ಟ್ ಹೊಲಿಸಿಕೊಂಡು ತಯಾರಾಗಿದ್ದಾರೆ. ಆದರೆ ಡಬಲ್ ಇಂಜಿನ್ ಸರ್ಕಾರದಲ್ಲಿ ಯಡಿಯೂರಪ್ಪ ಮಾರ್ಗದರ್ಶನ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಚುನಾವಣೆ ಎದುರಿಸಿ 150 ಸ್ಥಾನಗಳನ್ನು ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂಬ ವಿಶ್ವಾಸವನ್ನು ಪಕ್ಷದ ರಾಜ್ಯಾಧ್ಯಕ್ಷ ಹೇಳಿದರು.

ನಿವೃತ್ತ ಐಎಎಸ್ ಅಧಿಕಾರಿ ಎಂ. ಲಕ್ಷ್ಮೀನಾರಾಯಣ, ಸೀಕಲ್ ರಾಮಚಂದ್ರ ಗೌಡ ಶಿಡ್ಲಘಟ್ಟ, ಎಸ್ .ವಿ.ಆನಂದಗೌಡ, ಮಂಜುನಾಥ ಭಕ್ತರಹಳ್ಳಿ, ಮೂರ್ತಿ ಸೊನ್ನೇನಹಳ್ಳಿ, ಸುರೇಶ್ ಮಿಟ್ಟೇಮರಿ, ವೆಂಕಟರಾಮರೆಡ್ಡಿ, ನಾಗರಾಜ್, ಟಿ.ಬಿ.ಶ್ರೀಧರ, ವಿಜಯಕುಮಾರ್, ವೀರೇಂದ್ರ, ಭೈರಾರೆಡ್ಡಿ, ಆಂಜನೇಯ ತುಳವನೂರು ಮತ್ತಿತರ ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.