Solve the confusion of students, parents 
ಜಿಲ್ಲೆ

ಗ್ಯಾರಂಟಿಗಳಿಂದ ಬಿಜೆಪಿಗೆ ಸಂಕಟ

ಹುಬ್ಬಳ್ಳಿ: ಬಡವರಿಗೆ ಅನುಕೂಲವಾಗುವ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಾಗಲೇ ಬಿಜೆಪಿಯವರಿಗೆ ಸಂಕಟವಾಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಏನು ಆಗಿಲ್ಲವೆಂದು ಹೇಳಿದರೆ ನಾವು ಉತ್ತರಿಸುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹರಿಹಾಯ್ದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬಜೆಟ್‌ನಲ್ಲಿ ಏನು ಆಗಿಲ್ಲ ಎಂದು ಹೇಳುವುದನ್ನು ಬಿಟ್ಟು, ಇದು ಪಾಕಿಸ್ತಾನ, ಚೀನಾ ಬಜೆಟ್ ಎಂದರೆ ಏನೂ ಮಾಡಲಾಗುವುದಿಲ್ಲ ಎಂದರು.

ಕೇಂದ್ರ ಸರ್ಕಾರದ ಅಸಹಕಾರದ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾದರಿ ಬಜೆಟ್ ಮಂಡಿಸಿದ್ದಾರೆ ಎಂದರು.

ಹಂಪಿಯಲ್ಲಿ ವಿದೇಶಿ ಮಹಿಳೆ ಹಾಗೂ ಸ್ಥಳೀಯ ಮಹಿಳೆಯ ಮೇಲೆ ಅತ್ಯಾಚಾರ ಮಾಡಿರುವುದು ಹೇಯ ಕೃತ್ಯ. ಅಂಥ ವ್ಯಕ್ತಿಗಳನ್ನು ಮಟ್ಟ ಹಾಕುವುದಲ್ಲದೇ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.