Hands holding and caring a green young plant 
ಜಿಲ್ಲೆ

ಬಿಜೆಪಿಯಿಂದ ಏಕ್ ಪೇಡ್ ಮಾ ಕೆ ನಾಮ್ ಅಭಿಯಾನ

Mangaluru - Hariprasad Rai



ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಬೂತ್‌ಗಳಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಪುಣ್ಯತಿಥಿ ಹಾಗೂ ಜನ್ಮ ದಿನಾಚರಣೆ ಜುಲೈ 6ರವರೆಗೆ ಏಕ್ ಪೇಡ್ ಮಾ ಕೆ ನಾಮ್ (ಒಂದು ಗಿಡ ತಾಯಿಯ ಹೆಸರಿನಲ್ಲಿ) ಅಭಿಯಾನ ನಡೆಯಲಿದೆ
ಪಕ್ಷದ ಎಲ್ಲ ಕಾರ್ಯಕರ್ತರು ಸಸಿಗಳನ್ನು ನೆಡುವ ಮೂಲಕ ಅಭಿಯಾನದಲ್ಲಿ ಭಾಗವಹಿಸಬೇಕು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಅಭಿಯಾನ ನಡೆಸಬೇಕು. ಸ್ವಚ್ಛತಾ ಕಾರ್ಯಕ್ರಮ ಮತ್ತು ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮಗಳನ್ನು ಕೂಡಾ ಕಾರ್ಯಕರ್ತರು ನಡೆಸಬೇಕೆಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ.30ರಂದು ನಡೆಯುವ ಪ್ರಧಾನ ಮಂತ್ರಿ ಅವರ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪಕ್ಷದ ಎಲ್ಲ ಜನಪ್ರತಿನಿಧಿಗಳು , ಬೂತ್ ಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸ ಬೇಕೆಂದು ಅವರು ವಿನಂತಿಸಿದ್ದಾರೆ.
.................