ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಂದರ್ಭ ದ.ಕ. ಜಿಲ್ಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸಲು ದ.ಕ.ಜಿಲ್ಲಾ ಬಿಜೆಪಿ ನಿರ್ಧರಿಸಿದೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಪದಾಧಿಕಾರಿ ಪ್ರಮುಖರ ಸಭೆಯಲ್ಲಿ ಜಿಲ್ಲೆಯಾದ್ಯಂತ ವಿಜಯೋತ್ಸವ ಆಚರಣೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ . ಜೂ.9ರಂದು ಸಾಯಂಕಾಲ 7.15 ಕ್ಕೆ ಜಿಲ್ಲೆಯ ಪ್ರತೀ ಬೂತ್‌ನಲ್ಲಿ ಅಧ್ಯಕ್ಷರು ಹಾಗೂ
ಕಾರ್ಯಕರ್ತರು ವಿಜಯೋತ್ಸವ ಆಚರಿಸಬೇಕೆಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ನವದೆಹಲಿಯಲ್ಲಿ ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು ಸಾಯಂಕಾಲ 6.30ರಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನೇರ ಪ್ರಸಾರದ ಮೂಲಕ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
..................................