ಜಿಲ್ಲೆ

ಬಿಜೆಪಿಯಿಂದ ಕಾರ್ಗಿಲ್ ವಿಜಯ ದಿವಸ್

ಹುಬ್ಬಳ್ಳಿ: ಅರವಿಂದ ನಗರದಲ್ಲಿರುವ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜು. 26ರಂದು ಬೆಳಗ್ಗೆ 11 ಗಂಟೆಗೆ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಾಜಿ ಸೈನಿಕರಿಗೆ ಸನ್ಮಾನಿಸಲಾಗುವುದು. ಹುತಾತ್ಮರನ್ನು ಸ್ಮರಿಸಿ ಗೌರವ ಸಲ್ಲಿಸಲಾಗುವುದು ಹಾಗೂ ಅಮರ್ ಜವಾನ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಗುವುದು ಎಂದು ಜಿಲ್ಲಾ ವಕ್ತಾರ ರಾಜು ಕೋರ್ಯಾಣಮಠ ತಿಳಿಸಿದ್ದಾರೆ.