ಜಿಲ್ಲೆ

ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಖಚಿತ,  ವಿಎಕೆ ಫೌಂಡೇಷನ್ ಅಧ್ಯಕ್ಷ ವೆಂಕಟೇಶ ಕಾಟವೆ ಹೇಳಿಕೆ

Dharwada - Basavaraj Idli

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ಐದು ಗ್ಯಾರೆಂಟಿಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಬೇರೆ ಏನನ್ನೂ ಮಾಡುತ್ತಿಲ್ಲ. ಹಾಗಾಗಿ ಪ್ರಸ್ತುತ ರಾಜ್ಯದಲ್ಲಿ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ಖಚಿತ ಎಂದು ವಿಎಕೆ ಫೌಂಡೇಷನ್ ಅಧ್ಯಕ್ಷ ವೆಂಕಟೇಶ ಕಾಟವೆ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸೈಟ್ ಗಳ ಹಗರಣ, ವಾಲ್ಮೀಕಿ ನಿಗಮ ಮುಂತಾದ ಹಗರಣಗಳನ್ನು ರಾಜ್ಯದ ಜನರು ನೋಡುತ್ತಿದ್ದಾರೆ. ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಹಗಲಿರುಳು ಸರ್ಕಸ್ ಮಾಡುತ್ತಿದ್ದಾರೆ. ಈ ಮಧ್ಯೆ ಸಿಎಂ ರೇಸ್ ನಲ್ಲಿ ಡಜನ್ ಗಟ್ಟಲೆ ಹೆಸರುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರುತ್ತಿವೆ.

ಇದರಿಂದ ರಾಜ್ಯದಲ್ಲಿ ಜನಪರ ಕಾರ್ಯಗಳು ಆಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಈ ಎಲ್ಲ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಬೇಸತ್ತಿರುವ ಜನರು ಮತ್ತೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಬಯಸಿದ್ದಾರೆ.

ಹಾಗಾಗಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯ ಗಳಿಸುವುದರಲ್ಲಿ ಎರಡು ಮಾತಿಲ್ಲ ಎಂದು ವೆಂಕಟೇಶ ಕಾಟವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.