ಜಿಲ್ಲೆ

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತವೆಂದ ಶಾಸಕ ಜಿ.ಸೋಮಶೇಖರ ರೆಡ್ಡಿ

vijayavanibly

ಬಳ್ಳಾರಿ: ವಿಧಾನ ಪರಿಷತ್ ನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ಸಿಕ್ಕಿದ್ದು ಶಶೀಲ ಜಿ.ನಮೋಶಿ ಗೆಲ್ಲಲಿದ್ದಾರೆ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ಬುಧವಾರ ಈಶಾನ್ಯ ಶಿಕ್ಷಕರ ಮತ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನಾವು ಎಲ್ಲ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ತಲುಪಿದ್ದೇವೆ. ಕೇಂದ್ರ, ರಾಜ್ಯ ಸರ್ಕಾರ ಹಾಗೂ ಬಿಜೆಪಿ ಸಾಧನೆ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಅನುಕೂಲವಾಗಲಿದೆ ಎಂದರು.

ಕೋವಿಡ್ ಮುಂಜಾಗ್ರತಾ ಕ್ರಮ

ಜಿಲ್ಲೆಯ 28. ಕೇಂದ್ರಗಳಲ್ಲಿ ಮತದಾನ ನಡೆದಿದೆ. ನಗರದ ತಹಸಿಲ್ ಹಾಗೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಕಚೇರಿಯಲ್ಲಿ ನಾಲ್ಕು ಮತಗಟ್ಟೆ ಸ್ಥಾಪಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ಮಾಸ್ಕ್, ಫೇಸ್ ಶೀಲ್ಡ್ ಹಾಗೂ ಕೈಗವಸು ಧರಿಸಿದ್ದಾರೆ. ಮತದಾರರಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ಆರೋಗ್ಯ ಪರೀಕ್ಷೆ ನಡೆಸಲಾಗುತ್ತಿದೆ.