ಮಂಡ್ಯ: ನಮ್ಮ ನಿರೀಕ್ಷೆಯಂತೆ ದೇಶಕ್ಕೆ ನರೇಂದ್ರ ಮೋದಿ ಪ್ರಧಾನಮಂತ್ರಿ, ರಾಜ್ಯಕ್ಕೆ ಕುಮಾರಸ್ವಾಮಿ ಕೇಂದ್ರ ಸಚಿವರು ಎನ್ನುವ ಘೋಷಣೆ ನಿಜವಾಗಿದೆ ಎಂದು ಬಿಜೆಪಿ ಮಾಜಿ ನಗರಾಧ್ಯಕ್ಷ ಎಚ್.ಆರ್.ಅರವಿಂದ್ ಹೇಳಿದರು.
ನಗರದ ಚಾಮುಂಡೇಶ್ವರಿ ಬಡಾವಣೆಯ ಬೇಕ್ ಪಾಯಿಂಟ್ ಬಳಿ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಪಟಾಕಿ ಸಿಡಿಸಿ-ಸಿಹಿವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ. ಜತೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಂಡ್ಯ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಮತ್ತಷ್ಟು ಖುಷಿ ನೀಡಿದೆ ಎಂದು ನುಡಿದರು.
ಮುಖಂಡರಾದ ಮಲ್ಲಿಕಾರ್ಜುನ್, ಶಂಕರ್‌ಗೌಡ, ಲಕ್ಷ್ಮಣ್‌ಗೌಡ, ಯೋಗಾನಂದ, ಸಂತೋಷ್, ಶ್ರೀನಿವಾಸ್ ಮತ್ತಿತರಿದ್ದರು.