ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಜನ್ಮ ದಿನದ ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಸೆ.17ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1ರವರೆಗೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಬೆಳ್ತಂಗಡಿನಾರಾವಿಯ ಹಿರಿಯ ಪ್ರಾಥಮಿಕ ಶಾಲೆ ಸಾವ್ಯ, ಮೂಲ್ಕಿಯ ಹೋಟೆಲ್ ಆಧಿದನ್ ಸಭಾಂಗಣ. ಮಂಗಳೂರು ನಗರ ಉತ್ತರದ ಕಾವೂರಿನಲ್ಲಿರುವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣ, ಮಂಗಳೂರು ನಗರದ ಮಣ್ಣಗುಡ್ಡೆಯ ಸಂಘನಿಕೇತನ,ತೊಕ್ಕೊಟ್ಟುವಿನ ನಿರ್ವಿಕಲ್ಪ ಸಭಾಭವನ , ಬಂಟ್ವಾಳದ ಸ್ಪರ್ಶ ಕಲಾಮಂದಿರ ಬಿ.ಸಿ.ರೋಡ್, ಪುತ್ತೂರಿನ ಟೌನ್ ಬ್ಯಾಂಕ್ ಸಭಾಂಗಣ, ಕಡಬದ ಶ್ರೀಕಂಠ ಸ್ವಾಮಿ ಮತ್ತು ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ. ಪ್ರಧಾನಿ ಮೋದಿಯವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ
ಗುರುದತ್ತ್ ಜಿ ನಾಯಕ್ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
……………………..