ಮಂಗಳೂರು: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ನರೇಂದ್ರ ಮೋದಿ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಯುವ ಸಂವಾದ (ಯುವ ಚೌಪಾಲ್) ಕಾರ್ಯಕ್ರಮ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ನಡೆಯಲ್ಲಿದ್ದು, ಇದರ ಉದ್ಘಾಟನೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದರು. ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ಉಪಾಧ್ಯಕ್ಷೆ ಪೂಜಾ ಪೈ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್‌ರಾಜ್ ಕೃಷ್ಣಾಪುರ, ಮಾಧ್ಯಮ ಪ್ರಮುಖ ವಸಂತ ಪೂಜಾರಿ, ಮಂಗಳೂರು ದಕ್ಷಿಣ ಮಂಡಲ ಯುವಮೋರ್ಚಾ ಅಧ್ಯಕ್ಷ ಸಚಿನ್‌ರಾಜ್ ರೈ ಉಪಸ್ಥಿತರಿದ್ದರು.