ಜಿಲ್ಲೆ

ಚುನಾವಣೆಯಲ್ಲಿ ಬಿಜೆಪಿ ಸಾಧನೆ ಹರ್ಷ ತಂದಿದೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಭಾರತೀಯ ಜನತಾ ಪಕ್ಷವು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್​ ಗೆಲುವು ಮತ್ತು ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿರುವುದು ಹರ್ಷದ ಸಂಗತಿ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿ ಬಗ್ಗೆ ಕಾಂಗ್ರೆಸ್​ ಸೇರಿ ಮಿತ್ರ ಪಕ್ಷಗಳು ಅಪಪ್ರಚಾರ ನಡೆಸಿದರು. ಆದರೆ, ಬಿಜೆಪಿಯ ಜನಪರ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರರು ಆಶೀರ್ವಾದ ಮಾಡಿರುವರು.
ಜಮ್ಮು- ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ತೀರ್ಮಾನವನ್ನು ಜನರು ಬೆಂಬಲಿಸಿದ್ದಾರೆ. ಸರ್ಕಾರ ರಚಿಸಲು ಸರಳ ಬಹುಮತ ಸಿಗದಿದ್ದರೂ ಮತದಾರರು ಕೇಂದ್ರ ಸರ್ಕಾರದ ಕ್ರಮ ಸ್ವಾಗತಿಸಿದ್ದಾರೆ.
ದೇಶದಲ್ಲಿ ಬಿಜೆಪಿ ಪಾರಮ್ಯ ಮುಂದುವರೆದಿದ್ದು, ಕಾಂಗ್ರೆಸ್​ ನೇತೃತ್ವದ ಐಎನ್​ಡಿಎ ಕೂಟಕ್ಕೆ ಪುನಃ ಮುಖಭಂಗ ಆಗಿದೆ. ಮುಂಬರುವ ದಿನಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಇನ್ನಷ್ಟು ಉತ್ಸಾಹದಿಂದ ಮುನ್ನುಗ್ಗಲು ಈ ಫಲಿತಾಂಶ ಪೂರಕವಾಗಿದೆ ಎಂದು ಬೆಲ್ಲದ ತಿಳಿಸಿದ್ದಾರೆ.