ಜಿಲ್ಲೆ

ರಕ್ತದಾನ ಶ್ರೇಷ್ಠ ಮಾನವೀಯ ಸೇವೆ : ಕೆ.ಸಂಜೀವ ಪೂಜಾರಿ ಅಭಿಪ್ರಾಯ

ಸೌಮ್ಯ ಆರ್

ಬಂಟ್ವಾಳ: ರಕ್ತದಾನ ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ಸಮಾಜಮುಖಿ ಕಾರ್ಯಗಳ ಮೂಲಕ ಎಲ್ಲರ ಮನದಲ್ಲಿ ನೆಲೆ ನಿಂತಿರುವ ಯುವವಾಹಿನಿ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದು ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಕೆ.ಸಂಜೀವ ಪೂಜಾರಿ ತಿಳಿಸಿದರು.

ಯುವವಾಹಿನಿ ಬಂಟ್ವಾಳ ಘಟಕ ಆಶ್ರಯದಲ್ಲಿ ಶ್ರೀ ನಾರಾಯಣಗುರು ವೈದಿಕ ಸಮಿತಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಸಹಕಾರದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಧ್ಯಕ್ಷತೆ ವಹಿಸಿದ್ದರು. ಅನೇಕ ಬಾರಿ ರಕ್ತದಾನ ಮಾಡಿದ ಮಹೇಶ್ಚಂದ್ರ ಬಿ.ಟಿ., ಲೋಕೇಶ್ ಸುವರ್ಣ ಅಲೆತ್ತೂರು, ಗಣೇಶ್ ಪೂಂಜರೆಕೋಡಿ, ದಿನೇಶ್ ಸುವರ್ಣ ರಾಯಿ, ಹರೀಶ್ ಶಾಂತಿ, ರತ್ನಾಕರ ಪೂಜಾರಿ ಮದಂಗೋಡಿ ಅವರನ್ನು ಗೌರವಿಸಲಾಯಿತು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಸಂಜೀವ ಪೂಜಾರಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಶ್ರೀ ನಾರಾಯಣಗುರು ವೈದಿಕ ಸಮಿತಿ ಅಧ್ಯಕ್ಷ ಹರೀಶ್ ಶಾಂತಿ, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ರಾಯಿ ಕೊಯಿಲ ಅರಳ ಪ್ರತಿಷ್ಠಾಪನಾ ಮಹೋತ್ಸವ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಜೆ.ಎಸ್., ಯುವವಾಹಿನಿ ಕೇಂದ್ರ ಸಮಿತಿ ಆರೋಗ್ಯ ನಿರ್ದೇಶಕ ಗಣೇಶ್ ಪೂಂಜರೆಕೋಡಿ, ಯುವವಾಹಿನಿ ಬಂಟ್ವಾಳ ಘಟಕ ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನಾಗಭೂಷಣ್ ಉಪಸ್ಥಿತರಿದ್ದರು. 48 ದಾನಿಗಳು ರಕ್ತದಾನ ಮಾಡಿದರು. ಯುವವಾಹಿನಿ ಬಂಟ್ವಾಳ ಘಟಕ ಉಪಾಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿದರು. ಕಾರ್ಯದರ್ಶಿ ಚೇತನ್ ಮುಂಡಾಜೆ ವಂದಿಸಿದರು. ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು.