ವಿಜಯವಾಣಿ ಸುದ್ದಿಜಾಲ ಕಿನ್ನಿಗೋಳಿ
ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ನೇತೃತ್ವದಲ್ಲಿ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಕೆಮ್ರಾಲ್ ಗ್ರಾಮ ಪಂಚಾಯಿತಿ ಪಕ್ಷಿಕೆರೆ, ವೆನ್ಲಾಕ್ ಆಸ್ಪತ್ರೆ ಮಂಗಳೂರು ಮೊದಲಾದ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ಕೆಮ್ರಾಲ್ ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಡೆಯಿತು.
ಜಿಪಂ ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಯ್ಯದಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವೆನ್‌ಲಾಕ್ ಆಸ್ಪತ್ರೆಯ ವೈದ್ಯರಾದ ಡಾ.ಲತಾ ಮತ್ತು ಡಾ.ದೀಕ್ಷಾ ಚೌಹಾನ್ ರಕ್ತದಾನದ ಕುರಿತು ಮಾಹಿತಿ ನೀಡಿದರು. ಕೆಮ್ರಾಲ್ ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್ ಅಂಚನ್, ರೋಟರಿ ಕಾರ್ಯದರ್ಶಿ ಗಣೇಶ್ ಶೆಟ್ಟಿಗಾರ್, ಹರೀಶ್ ಹೊಸಕಾಡು, ಗಣಪತಿ ಆಚಾರ್ಯ, ಸರಸ್ವತಿ ದಾಸ್, ಧನಂಜಯ್ ಪಿ.ಶೆಟ್ಟಿಗಾರ್, ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿಗಾರ್, ಕಾರ್ಯದರ್ಶಿ ನಮಿತ್ ಮತ್ತಿತರರು ಉಪಸ್ಥಿತರಿದ್ದರು. 53 ರಕ್ತದಾನಿಗಳು ರಕ್ತದಾನ ಮಾಡಿದರು.
ಇನ್ನರ್‌ವೀಲ್ ಕ್ಲಬ್ ಕಿನ್ನಿಗೋಳಿ, ರೋಟರಿ ಕ್ಲಬ್ ಕಿನ್ನಿಗೋಳಿ, ಚಾಮರ ಫೌಂಡೇಷನ್, ನಾಗಬ್ರಹ್ಮ ಭಜನಾ ಮಂಡಳಿ ಹೊಸಕಾಡು, ಸೈಂಟ್ ಜೂಡ್ ಅಸೋಸಿಯೇಷನ್ ಪಕ್ಷಿಕೆರೆ, ಕಂಬಳಬೆಟ್ಟು ಫ್ರೆಂಡ್ಸ್ ತೋಕೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್, ಯುವ ಕೇಸರಿ ಕೊಕುಡೆ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಕ್ಷಿಕೆರೆ , ರಿಕ್ಷಾ ಚಾಲಕ-ಮಾಲೀಕರ ಸಂಘ ಪಕ್ಷಿಕೆರೆ ಮತ್ತು ಚರ್ಚ್ ನಿಲ್ದಾಣ ಹಾಗೂ ಶ್ರೀ ವಿನಾಯಕ ಮಹಿಳಾ ಮಂಡಳಿ ಸಹಯೋಗ ನೀಡಿದ್ದವು.